ಇತರೆ
ಚಲಿಸುತ್ತಿದ್ದ ಸ್ಕೂಟಿ ಮೇಲೆ ಬಿದ್ದ ಮರ: ಸವಾರ ಸ್ಥಳದಲ್ಲೇ ಸಾವು

Views: 101
ಕನ್ನಡ ಕರಾವಳಿ ಸುದ್ದಿ: ಚಲಿಸುತ್ತಿದ್ದ ಸ್ಕೂಟಿ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡಬ ತಾಲೂಕಿನ ಪುಳಿಕುಕ್ಕು ಬಳಿ ನಡೆದಿದೆ. ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಮರ ಬಿದ್ದಿದ್ದು, ಸ್ಥಳದಲ್ಲೇ ಸವಾರ ಸಾವನ್ನಪ್ಪಿದ್ದಾರೆ.
ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.