ಚಾರ್ಮಾಡಿ ಘಾಟ್‌ನ ತಿರುವಿನಲ್ಲಿ ಬಸ್ ಪಲ್ಟಿ: 29 ಮಂದಿಗೆ ಗಾಯ,5 ಮಂದಿ ಗಂಭೀರ
Views: 68
ಕನ್ನಡ ಕರಾವಳಿ ಸುದ್ದಿ: ಚಿಕ್ಕಮಗಳೂರು ಜಿಲ್ಲೆ ಹಾಗೂ ಮಂಗಳೂರು, ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಜ್ಯ ಹೆದ್ದಾರಿಯಲ್ಲಿ ಬರುವ ಚಾರ್ಮಾಡಿ ಘಾಟ್‌ನ ಮೂರನೇ ತಿರುವಿನಲ್ಲಿ ಖಾಸಗಿ ಬಸ್ ಪಲ್ಟಿಯಾಗಿ, 29 ಪ್ರಯಾಣಿಕರು ಗಾಯಗೊಂಡು 5 ಮಂದಿ ಗಂಭೀರ ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದೆ.
ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ತೆರಳಿದ್ದ ತುಮಕೂರು ಜಿಲ್ಲೆಯ ಪಾವಗಡ ಮೂಲದವರು, ಮರಳಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಮಗುಚಿ ಬಿದ್ದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲರೂ ಪಾವಗಡವರು ಎಂದು ತಿಳಿದುಬಂದಿದೆ. ಗಾಯಾಳುಗಳಲ್ಲಿ 5 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಅಪಘಾತ ಸಂಭವಿಸುತ್ತಿದ್ದಂತೆ, ಸ್ಥಳೀಯರು ಮತ್ತು ವಾಹನ ಸವಾರರು ರಕ್ಷಣೆಗೆ ಧಾವಿಸಿದ್ದಾರೆ. ಅಲ್ಲದೆ, ಸುಮಾರು 5ರಿಂದ 6 ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಆಗಮಿಸಿ, ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ರವಾನಿಸಿವೆ. ಗಾಯಾಳುಗಳನ್ನು ಕಕ್ಕಿಂಜೆ ಕೃಷ್ಣ ಆಸ್ಪತ್ರೆ ಹಾಗೂ ಬೆಳ್ತಂಗಡಿಯ ವಿವಿಧ ಆಸತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಈವರೆಗೆ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ






