ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್
Views: 39
ಕನ್ನಡ ಕರಾವಳಿ ಸುದ್ದಿ: ಬೆಂಗಳೂರಿನಿಂದ ತೀರ್ಥಹಳ್ಳಿಗೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತ ಬಸ್‌ವೊಂದು ಮುಡುಬಾ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಐರಾವತ ಬಸ್, ರಸ್ತೆ ಪಕ್ಕದಲ್ಲಿದ್ದ ಅಡಿಕೆ ತೋಟಕ್ಕೆ ನುಗ್ಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಚಾಲನಾ ಸಿಬ್ಬಂದಿ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವೇಗವಾಗಿ ನುಗ್ಗಿದ ಬಸ್‌ನ ಪರಿಣಾಮವಾಗಿ ತೋಟದ ರಕ್ಷಣಾ ಬೇಲಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಕೆಲವು ಅಡಿಕೆ ಗಿಡಗಳು ಧರಾಶಾಹಿಯಾಗಿವೆ. ತೋಟದ ಮಾಲೀಕರಿಗೆ ಇದರಿಂದ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಸದ್ದು ಕೇಳಿ ಧಾವಿಸಿ ಬಂದ ಮುಡುಬಾ ಗ್ರಾಮದ ಸ್ಥಳೀಯ ನಿವಾಸಿಗಳು, ತಕ್ಷಣವೇ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಹೊರಗೆ ಕರೆತರಲು ನೆರವಾಗಿದ್ದಾರೆ. ಆತಂಕದಲ್ಲಿದ್ದ ಪ್ರಯಾಣಿಕರಿಗೆ ಧೈರ್ಯ ತುಂಬುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ಘಟನೆಯು ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.






