ಕರಾವಳಿ
ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: ಮೂವರು ಸ್ಥಳದಲ್ಲೇ ಸಾವು

Views: 286
ಕನ್ನಡ ಕರಾವಳಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಆಲ್ಟೋ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಡಿ.28 ರಂದು ಶನಿವಾರ ಬೆಳಿಗ್ಗೆ ನಡೆದಿದೆ.
ಅಣ್ಣು ನಾಯ್ಕ್, ಚಿದಾನಂದ, ರಮೇಶ್ ನಾಯ್ಕ್ ಮೃತ ದುರ್ದೈವಿಗಳು. ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳು. ನಿದ್ದೆ ಮಂಪರಿನಲ್ಲಿ ಕಾರು ಓಡಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಈ ದುರಂತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.