ಇತರೆ
ಚಿಕ್ಕಮಗಳೂರು:ಭಾರೀ ಗಾಳಿ ಮಳೆಗೆ ಮಹಿಳೆ ಹಾಗೂ ಕಾರಿನ ಮೇಲೆ ಬಿದ್ದ ಬೃಹತ್ ಮರ, ಮಹಿಳೆ ಸಾವು.ಮೂವರು ಗಂಭೀರ

Views: 67
ಚಿಕ್ಕಮಗಳೂರು: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಮೇಲೆ ಮರ ಬಿದ್ದು ದಾರುಣವಾಗಿ ಸಾವನ್ನಪ್ಪಿರೋ ಘಟನೆ ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ನಡೆದಿದೆ. ಕೊಪ್ಪ ಮೂಲದ ಸವಿತಾ (48) ಮೃತ ದುರ್ದೈವಿ.
ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಹಾಗೂ ಕಾರಿನ ಮೇಲೆ ಏಕಾಏಕಿ ಬೃಹತ್ ಗಾತ್ರದ ಮರ ಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದಾಳೆ. ಕಾರಿನಲ್ಲಿದ್ದ ಮೂವರಿಗೂ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೂಡಲೇ ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರು ಭೇಟಿ ನೀಡ ಪರಿಶೀಲನೆ ನಡೆಸಿದ್ದಾರೆ. ಸದ್ಯ ಬೃಹತ್ ಮರ ಬಿದ್ದು ಜಖಂಗೊಂಡಿರುವ ಕಾರನ್ನು ತೆರವುಗೊಳಿಸುತ್ತಿದ್ದಾರೆ.






