ಕನ್ನಡ ಕರಾವಳಿ ಸುದ್ದಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ಬುರುಡೆ ಪ್ರಕರಣಕ್ಕೆಸಂಬಂಧಿಸಿದಂತೆ, ವಿಶೇಷ ತನಿಖಾ ದಳ ತನಿಖೆಯನ್ನು ತೀವ್ರಗೊಳಿಸಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಚಿನ್ನಯ್ಯ ಹಾಗೂ ಆತನ ಪತ್ನಿಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿದ ಹಲವರಿಗೆ ಎಸ್‌ಐಟಿ ಪೊಲೀಸರು ನೋಟೀಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಚಿನ್ನಯ್ಯನ ಬ್ಯಾಂಕ್ ಖಾತೆಯ ವಿವರಗಳನ್ನು ಈಗಾಗಲೇ ಪಡೆದಿರುವ ಎಸ್‌ಐಟಿ, ಸುಮಾರು 3 ಲಕ್ಷ ರೂಪಾಯಿಗೂ ಅಧಿಕ ಹಣ ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ಜಮೆಯಾಗಿರುವುದನ್ನು ಪತ್ತೆ ಹಚ್ಚಿದೆ. ಈ ಹಣ ವರ್ಗಾವಣೆಗಳ ಆಧಾರದ ಮೇಲೆ, ಹಣ ಕಳುಹಿಸಿದವರ ಸಂಪೂರ್ಣ ವಿವರಗಳನ್ನು ಸಂಗ್ರಹಿಸಲಾಗಿದೆ. ಪೊಲೀಸರ ಪ್ರಕಾರ, ಈ ವ್ಯಕ್ತಿಗಳನ್ನು ವಿಚಾರಣೆಗೆ ಕರೆಸಿ, ಹಣ ವರ್ಗಾವಣೆ ಮಾಡಿದ ಉದ್ದೇಶದ ಬಗ್ಗೆ ಪ್ರಶ್ನಿಸಲಾಗುವುದು.