ಜಗಳ ಬಿಡಿಸಲು ಮಧ್ಯ ಪ್ರವೇಶಿಸಿದ 10ನೇ ತರಗತಿ ವಿದ್ಯಾರ್ಥಿ ಹಲ್ಲೆಗೊಳಗಾಗಿ ಸಾವು
Views: 52
ಕನ್ನಡ ಕರಾವಳಿ ಸುದ್ದಿ: ಜಗಳ ಬಿಡಿಸಲು ಹೋದ 16 ವರ್ಷದ ಎಸ್ಎಸ್ಎಲ್ ಸಿ ವಿದ್ಯಾರ್ಥಿ ಮೇಲೆ ಅನ್ಯ ಕೋಮಿನ ಬಾಲಕರು ಹಲ್ಲೆಗೆ ನಡೆಸಿದ ಪರಿಣಾಮ ಬಾಲಕ ಸಾವಪ್ಪಿದ ಘಟನೆ ನಡೆದಿದೆ.
ಶಿವಮೊಗ್ಗ ನಗರದ ಸೂಳೆಬೈಲು ಬಡಾವಣೆಯಲ್ಲಿ ಸೋಮವಾರ ಸಂಜೆ ಭೀಕರ ಘಟನೆಯೊಂದು ನಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ.
ಮೃತ ಬಾಲಕನನ್ನು ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್, ಸ್ಪೆಷಲ್ ತರಗತಿ ಮುಗಿಸಿ ಹೊರಬಂದಾಗ ಕೆಲ ವಿದ್ಯಾರ್ಥಿಗಳ ನಡುವೆ ಜಗಳ ನಡೆಯುತ್ತಿತ್ತು. ಪರಿಸ್ಥಿತಿ ತೀವ್ರವಾಗುತ್ತಿದ್ದಂತೆ ಅದನ್ನು ಬಿಡಿಸಲೆಂದು ಸಂಕೇತ್ ಮಧ್ಯಪ್ರವೇಶಿಸಿದ್ದಾನೆ. ಆದರೆ, ಇದೇ ವೇಳೆ ನಾಲ್ವರು ವಿದ್ಯಾರ್ಥಿಗಳು ಅವನ ಮೇಲೆ ಹಲ್ಲೆ ನಡೆಸಿದರೆಂದು ತಿಳಿದುಬಂದಿದೆ.
ಹಲ್ಲೆಯ ವೇಳೆ ಎದೆಯ ಭಾಗಕ್ಕೆ ಬಲವಾದ ಹೊಡೆತ ಬಿದ್ದ ಪರಿಣಾಮ ಸಂಕೇತ್ ಅಸ್ವಸ್ಥನಾಗಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಅವನು ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಘಟನೆ ಸಂಬಂಧಿಸಿ ತುಂಗನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ತಿಳಿಸಿದ್ದಾರೆ.






