ಶಿಕ್ಷಣ

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ : ಸಂಭ್ರಮದ ಮಕ್ಕಳ ದಿನಾಚರಣೆ 

Views: 230

ಕಿರಿಮುಂಜೇಶ್ವರ: ನವೆಂಬರ್ 14ರಂದು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಮಕ್ಕಳ ದಿನಾಚರಣೆ ಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಸಭೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ, ಹಿರಿಯ ಶಿಕ್ಷಕಿ ನಯಾಜುನ್ನಿಸಾ, ವಿದ್ಯಾರ್ಥಿ ನಾಯಕ ಮಹಮ್ಮದ್ ಸಫಾನ್, ವಿದ್ಯಾರ್ಥಿ ನಾಯಕಿ ಸಪ್ತಮಿ ಅವರು ಜವಹಾರ್ ಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಶ್ರೀಮತಿ ಕೃಪಾಶ್ರೀ ಅವರು ತಮ್ಮ ಪ್ರಾಸ್ತಾವಿಕ ಮಾತುಗಳಲ್ಲಿ ಮಕ್ಕಳ ಬೆಳವಣಿಗೆ ಹಾಗೂ ಜೀವನಕ್ಕೆ ಪೂರಕವಾದ ವಿಷಯಗಳನ್ನು ಕಥಾ ರೂಪದಲ್ಲಿ ತಿಳಿಸಿದರು. ಮಕ್ಕಳ ದಿನಾಚರಣೆ ಪ್ರಯುಕ್ತವಾಗಿ ಹಮ್ಮಿಕೊಂಡ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಮುಖ್ಯ ಶಿಕ್ಷಕಿಯಾದ ದೀಪಿಕಾ ಆಚಾರ್ಯ ಅವರು ಬಹುಮಾನ ವಿತರಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಮನರಂಜಿಸುವ ಸಲುವಾಗಿ ಶಿಕ್ಷಕ- ಶಿಕ್ಷಕಿಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು.

ಈ ಸಮಾರಂಭದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಬೋಧಕ ಮತ್ತು ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಿಕ್ಷಕಿಯಾದ ನಯಾಜುನ್ನಿಸಾ ಸ್ವಾಗತಿಸಿದರು. ಶ್ರೀಮತಿ ಸ್ವಪ್ನ ವಂದಿಸಿದರು. ಶ್ರೀಮತಿ ಅನಿತಾ ಕಾರ್ಯಕ್ರಮ ನಿರೂಪಿಸಿದರು.

Related Articles

Back to top button