ಶಿಕ್ಷಣ

ಜನತಾ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಗೆ ಆಯ್ಕೆ 

Views: 21

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಮನ್ವಿ , ಸನ್ನಿಧಿ ಹಾಗೂ ನಿಸರ್ಗ ದೇವಾಡಿಗ ಅವರು ಜಿಲ್ಲಾ ಮಟ್ಟದ ಯುವ ಸಂಸತ್–2026 ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

ಮಾದರಿಯ ಯುವ ಸಂಸತ್ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಸಂಸದೀಯ ಕಾರ್ಯವೈಖರಿ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶ ಹೊಂದಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶ ಪಡೆದಿದ್ದಾರೆ.

ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Back to top button
error: Content is protected !!