ಇತರೆ

ಜನತಾ ಪಿಯು ಕಾಲೇಜು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್, ಜಿಲ್ಲೆಗೆ ಪ್ರಥಮ ರ‍್ಯಾಂಕ್ ಟಾಪ್ 10ರಲ್ಲಿ 17 ರ‍್ಯಾಂಕ್ 

ರಾಜ್ಯಕ್ಕೆ ದ್ವಿತೀಯ ಪಡೆದ ವಿದ್ಯಾರ್ಥಿನಿ ರಶ್ಮಿಗೆ 2 ಲಕ್ಷ ನಗದು ಪುರಸ್ಕಾರ : ಸಾಧಕರಿಗೆ ನಗದು ಬಹುಮಾನ ಘೋಷಣೆ

Views: 156

ಕನ್ನಡ ಕರಾವಳಿ ಸುದ್ದಿ :ವಿಜ್ಞಾನ ವಿಭಾಗದಲ್ಲಿ 598 ಅಂಕಗಳನ್ನು ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿನಿ ರಶ್ಮಿ ಅವರಿಗೆ ಸಮರ್ಪಣಾ ಎಜುಕೇಶನಲ್ ಟ್ರ್ರಸ್ಟ್ ಅಧ್ಯಕ್ಷ, ಪ್ರಾಂಶುಪಾಲ ಗಣೇಶ್ ಆರ್. ಮೊಗವೀರ ಅವರು 2 ಲಕ್ಷ ರೂ. ನಗದು ಘೋಷಣೆ ಮಾಡಿದ್ದಾರೆ.

 ಹೆಮ್ಮಾಡಿಯ ಮತ್ತ್ವಜ್ಯೋತಿ ಸಭಾಂಗಣದಲ್ಲಿ ರ‍್ಯಾಂಕ್ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ಸಂಸ್ಥೆ ಸ್ಥಾಪನೆಯಾದ ನಾಲ್ವೇ ವರ್ಷಗಳಲ್ಲಿ ಕ್ರೀಡೆ, ಸಾಂಸ್ಕೃತಿಕ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಲವು ಸಾಧನೆಗಳನ್ನು ಮಾಡಿದ್ದೇವೆ. ಕೇವಲ ಒಂದೆರಡು ಅಂಕಗಳಿಂದ ರಾಜ್ಯ ಮಟ್ಟದ ರ‍್ಯಾಂಕ್ ತಪ್ಪುತ್ತಿತ್ತು. ಆದರೆ ಈ ಬಾರಿ ಹಲವು ಯೋಜನೆಗಳನ್ನು ಕಾರ್ಯ ರೂಪಕ್ಕೆ ತಂದು ಭೋದಕ ಸಿಬ್ಬಂದಿಗಳ ಪರಿಶ್ರಮದಿಂದಾಗಿ ವಿದ್ಯಾರ್ಥಿಗಳು ಹಲವು ರಾಜ್ಯ ಮಟ್ಟದ ಸಾಧನೆಗಳನ್ನು ಮಾಡಿ ಜನತಾ ಸಂಸ್ಥೆಯ ಕೀರ್ತಿಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಕಾಲೇಜು ಆರಂಭಗೊಂಡ ದಿನಗಳಿಂದಲೂ ಸಾಕಷ್ಟು ಸಮಸ್ಯೆಗಳು ಎದುರಾಗಿದ್ದು, ಜನತಾ ಎಂದರೆ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಗಳಿಗೆ ಮಾತ್ರ ಸೀಮಿತ ಎನ್ನುವ ಟೀಕೆಗಳು ವ್ಯಕ್ತವಾದವು. ಆದರೆ ನಮ್ಮ ಹೆಮ್ಮೆಯ ವಿದ್ಯಾರ್ಥಿಗಳು ಫಲಿತಾಂಶದಲ್ಲಿ ರಾಜ್ಯ ಮಟ್ಟದ ಸಾಧನೆ ಮಾಡುವ ಮೂಲಕ ಈ ಎಲ್ಲ ಟೀಕೆಗಳನ್ನು ಸುಟ್ಟು ಭಸ್ಮ ಮಾಡಿದ್ದಾರೆ. ನಮ್ಮದು ಹಣ ಮಾಡುವ ಶಿಕ್ಷಣವಲ್ಲ. ಎಲ್ಲ ವಿದ್ಯಾರ್ಥಿಗಳಿಗೂ ಗುಣಾತ್ಮಕ ಶಿಕ್ಷಣ ನೀಡುವ ಉದ್ದೇಶದಿಂದ 180ಕ್ಕೂ ಅಧಿಕ ಸಿಬ್ಬಂದಿಗಳನ್ನು ನೇಮಿಸಿಕೊಂಡು ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದೇವೆ ಎಂದರು.

ವಿನೂತನ ಕಾರ್ಯಕ್ರಮ

590ಕ್ಕಿಂತ ಅಧಿಕ ಅಂಕ ಪಡೆದ ಸುಮಾರು 17 ವಿದ್ಯಾರ್ಥಿಗಳನ್ನು ವೇದಿಕೆಗೆ ಹಿಂದಿರುವ ಕರೆಸಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕಿಯರ ಬಳಗ ಅಭಿನಂದಿಸಿದರು . ವಿದ್ಯಾರ್ಥಿಗಳ ಸಾಧನೆಯ ಪೋಷಕರನ್ನು ವಿದ್ಯಾರ್ಥಿಗಳೊಂದಿಗೆ ಕೂರಿಸಿ ಶಾಲು, ಹಾರ, ಪೇಟತೊಡಿಸಿ, ಆರತಿ ಬೆಳಗಿ ಸನ್ಮಾನಿಸಲಾಯಿತು. ಸಾಧಕ ವಿದ್ಯಾರ್ಥಿಗಳಿಗೆ ಅವರ ಪೋಷಕರಿಂದಲೇ ಸಿಹಿ ತಿನ್ನಿಸುವ ಮೂಲಕ ಕಾಲೇಜು ಆಡಳಿತ ಮಂಡಳಿ ಸಾಧನೆಗೈದ ವಿದ್ಯಾರ್ಥಿಗಳನ್ನು ವಿನೂತನವಾಗಿ ಅಭಿನಂದಿಸಿತು. 

ಸಾಧಕರಿಗೆ ನಗದು ಬಹುಮಾನದ ಸುರಿಮಳೆ

ವಿಜ್ಞಾನ ವಿಭಾಗದಲ್ಲಿ 598 ಅಂಕಗಳನ್ನು ಪಡೆದು ರಾಜ್ಯಕ್ಕೆ ದ್ವಿತೀಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ರಡ್ಡಿ ಅವರಿಗೆ ಎರಡು ಲಕ್ಷ ರೂ. ನಗದು, 597 ಅಂಕ ಪಡೆದು ರಾಜ್ಯಕ್ಕೆ ಮೂರನೇ ಸ್ಥಾನ ಹಾಗೂ ಜಿಲ್ಲೆಗೆ 2ನೇ ಸ್ಥಾನಿಯಾದ ಶ್ರಾವ್ಯ ಜಿ. ದೇವಾಡಿಗ ಅವರಿಗೆ ಒಂದು ಲಕ್ಷ ರು. ನಗದು, 596 ಅಂಕಗಳನ್ನು ಪಡೆದು ರಾಜ್ಯಕ್ಕೆ ನಾಲ್ಕನೇ ಸ್ಥಾನಿಯಾದ ಅಕ್ಷತಾ ವೀರಣ್ಣ ಹಾಗೂ ವಾಣಿಜ್ಯ ವಿಭಾಗದಲ್ಲಿ 597 ಅಂಕಗಳನ್ನು ಪಡೆದು ರಾಜ್ಯಕ್ಕೆ ನಾಲ್ಕನೇ ಬ್ಯಾಂಕ್ ಪಡೆದ ಶಮ್ಯಾ ಶೆಟ್ಟಿ ಅವರಿಗೆ ತಲಾ 50,000 ರೂ. ನಗದು ಮತ್ತು 590ಕ್ಕಿಂತ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ತಲಾ 25,000 ರು. ನಗದು ಘೋಷಣೆ ಮಾಡಲಾಗಿದ್ದು, ನಗದನ್ನು ಕಾಲೇಜಿನಲ್ಲಿ ನಡೆಯುವ ಅಭಿನಂದನಾ ಸಮಾರಂಭದಲ್ಲಿ ಹಸ್ತಾಂತರಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಗಣೇಶ್ ಆರ್. ಮೊಗವೀರ ತಿಳಿಸಿದ್ದಾರೆ.

ವೇದಿಕೆಯಲ್ಲಿ ಉಪಪ್ರಾಂಶುಪಾಲ ರಮೇಶ್ ಪೂಜಾರಿ, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಉದಯ್ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

Related Articles

Back to top button
error: Content is protected !!