ಸಾಮಾಜಿಕ
ಜಾತಿ ಗಣತಿ ಮಾಡುತ್ತಿದ್ದಾಗಲೇ ಶಿಕ್ಷಕಿಗೆ ಹೃದಯಾಘಾತ

Views: 105
ಕನ್ನಡ ಕರಾವಳಿ ಸುದ್ದಿ: ಕರ್ನಾಟಕದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದೆ. ಈ ಸಮೀಕ್ಷೆಗೆ ಶಾಲಾ ಶಿಕ್ಷಕರನ್ನು ಸಮೀಕ್ಷಕರಾಗಿ ಆಯೋಜಿಸಿಲಾಗಿದೆ. ಈ ಹಿನ್ನೆಲೆ ಸಮೀಕ್ಷೆಗೆಂದು ಹೋದ ವೇಳೆ ಶಿಕ್ಷಕಿಯೊಬ್ಬರು ಹೃದಯಾಘಾತಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಶಿಕ್ಷಕಿ ಆಸ್ಪತ್ರೆಗೆ ದಾಖಲಾಗಿದ್ದು, ಸ್ಟಂಟ್ ಅಳವಡಿಸಲಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ಸಮೀಕ್ಷೆಗೆಂದು ಹೋದ ಶಾಲಾ ಶಿಕ್ಷಕಿ ಯಶೋಧ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಇವರು ಬೊಮ್ಮಸಂದ್ರದ ಸರ್ಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.