ಶಿಕ್ಷಣ

ಜಾತಿ ಸಮೀಕ್ಷೆ; ರಾಜ್ಯಾದ್ಯಂತ ಶಾಲಾ ಸಮಯ ಬದಲಾವಣೆ

Views: 94

ಕನ್ನಡ ಕರಾವಳಿ ಸುದ್ದಿ: ರಾಜ್ಯ ಸರಕಾರ ಜಾತಿ ಗಣತಿ ಮಾಡುವ ಕಾರ್ಯ ಮುಗಿಯದ ಕಾರಣ ಅವಧಿ ವಿಸ್ತರಣೆಯನ್ನು ಮಾಡಲಾಗಿದೆ. ಹೀಗಾಗಿ ಕರ್ನಾಟಕದಾದ್ಯಂತ ಸರಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಕಳೆದ ಸೆಪ್ಟೆಂಬರ್ 22ರಿಂದ ಜಾತಿ ಗಣತಿ ಆರಂಭವಾಗಿದ್ದು,. ಈ ಗಣತಿಗೆ ರಾಜ್ಯ ಸರ್ಕಾರ ಅಕ್ಟೋಬರ್ 7ರಂದು ಡೆಡ್‌ಲೈನ್ ನೀಡಿತ್ತು. ಆದರೆ ಸರ್ಕಾರಕ್ಕೆ ಕೊಟ್ಟ ಗಡುವಿನೊಳಗೆ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಹೀಗಾಗಿ, ಅಕ್ಟೋಬರ್ 8 ರಿಂದ ಶಾಲಾ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ.

ಅರ್ಧ ದಿನ ಮಾತ್ರ ಮಕ್ಕಳಿಗೆ ಶಾಲೆ ನಡೆಯಲಿದ್ದು, ಆ ಬಳಿಕ ಶಿಕ್ಷಕರು ಗಣತಿ ಕಾರ್ಯಕ್ಕೆ ತೆರಳಲಿದ್ದಾರೆ. ಇನ್ನು ಶಾಲಾ ಸಮಯ ಬದಲಾವಣೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಮಾತ್ರ ಅನ್ವಯವಾಗಲಿದೆ.

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ಟೋಬ‌ರ್ 8ರಿಂದ 24ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ ಇರಲಿದೆ. ಅಲ್ಲದೆ ಸಮೀಕ್ಷೆಯನ್ನು ಅಕ್ಟೋಬ‌ರ್ 24ರೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ.

ರಾಜ್ಯದ ಇತರೆ ಭಾಗಗಳಲ್ಲಿ ಅಕ್ಟೋಬ‌ರ್ 8ರಿಂದ 12ರವರೆಗೆ ಶಾಲಾ ತರಗತಿ ಬೆಳಿಗ್ಗೆ 8ರಿಂದ ಅಪರಾಹ್ನ 1 ಗಂಟೆಯವರೆಗೆ ಇರಲಿದೆ. ಸಮೀಕ್ಷೆಯನ್ನು ರಜಾ ದಿನಗಳಲ್ಲಿಯೂ ಕೈಗೊಂಡು ಅಕ್ಟೋಬ‌ರ್ 12ರೊಳಗೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.

Related Articles

Back to top button