ರಾಜಕೀಯ

ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಬಿಜೆಪಿ ಮಹಿಳಾ ಮೋರ್ಚಾ ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್, ವ್ಯಾಪಕ ಖಂಡನೆ

Views: 121

ಕನ್ನಡ ಕರಾವಳಿ ಸುದ್ದಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ, ಮನಪಾ ನಿಕಟಪೂರ್ವ ಸದಸ್ಯೆ ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಾಗಿದ್ದು ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಸುಹಾಸ್ ಶೆಟ್ಟಿ ಹತ್ಯೆಯ ಸಂದರ್ಭ ಹಂತಕರ ಜೊತೆ ಮಾತಾಡಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರ ಬಗ್ಗೆ ವ್ಯಾಪಕ ಅನುಮಾನ ವ್ಯಕ್ತವಾಗಿತ್ತು. ಈ ವೇಳೆ ಶ್ವೇತಾ ಪೂಜಾರಿ ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ “ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ? ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಈ ಬಗ್ಗೆ ಯಾಕೆ ಮಾತಾಡುತ್ತಿಲ್ಲ?” ಎಂಬರ್ಥದಲ್ಲಿ ಪೋಸ್ಟ್ ಮಾಡಿದ್ದರು.ಈ ಕಾರಣಕ್ಕೆ ಪೊಲೀಸರಿಗೆ ದೂರು ನೀಡಿದ್ದು ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.

 

Related Articles

Back to top button