ಜಿಲ್ಲಾ ಮಟ್ಟದ ಕವಿಗೋಷ್ಠಿಗೆ ಕವಿತೆಗಳ ಆಹ್ವಾನ

Views: 44
ಉಡುಪಿ: ಕರ್ನಾಟಕ ಯುವ ಬರಹಗಾರರ ಬಳಗದ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ಸಂಸ್ಮರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಪ್ರಥಮ ಕವಿಗೋಷ್ಠಿಯನ್ನು ಉಡುಪಿ ನಗರದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಜಿಲ್ಲೆಯ ಆಸಕ್ತ ಕವಿ-ಕವಯಿತ್ರಿಯರಿಂದ ಕವನಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಜಿ.ಎಸ್. ಕಿರಣ್ ಕುಮಾರ್ ತಿಳಿಸಿದ್ದಾರೆ.
ಈ ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಛಿಸುವ ಜಿಲ್ಲೆಯ ಯಾವುದೇ ವಯೋಮಾನದ ಆಸಕ್ತ ಕವಿ-ಕವಯಿತ್ರಿಯರು ಯಾವುದೇ ವಸ್ತು ವಿಷಯ ಕುರಿತು ರಚಿಸಿದ, ತಮ್ಮ ಸ್ವ-ರಚಿತ 20 ಸಾಲುಗಳ ಮಿತಿಯೊಳಗಿನ ಎರಡು ಕವಿತೆಗಳು / ಗಜಲ್ ಗಳನ್ನು ಅಥವಾ 6 ಸಾಲಿನ ಮಿತಿಯೊಳಗಿನ ಆರು ಚುಟುಕು / ಹನಿಗವಿತೆಗಳನ್ನು ಕಳುಹಿಸಿಕೊಡಬೇಕು. ಆಯ್ಕೆಯಾದ ಕವಿತೆಗಳ ಕವಿಗಳಿಗೆ ಜಿಲ್ಲಾ ಮಟ್ಟದ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಅವಕಾಶ ಮಾಡಿಕೊಡಲಾಗುವುದು. ಜೊತೆಗೆ ಭಾಗವಹಿಸುವ ಎಲ್ಲಾ ಕವಿಗಳಿಗೂ ಬಳಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುವುದು.
ಆಸಕ್ತ ಕವಿಗಳು ದಿನಾಂಕ30.11.2024 ರೊಳಗೆ ತಲುಪುವಂತೆ ಸ್ವರಚಿತ ಎರಡು ಕವಿತೆಗಳನ್ನು ತಮ್ಮ ಸಂಕ್ಷಿಪ್ತ ಪರಿಚಯದೊಂದಿಗೆ ಜಿ.ಎಸ್. ಕಿರಣ್ ಕುಮಾರ್, ಜಿಲ್ಲಾಧ್ಯಕ್ಷರು, ಕರ್ನಾಟಕ ಯುವ ಬರಹಗಾರರ ಬಳಗ(ರಿ.), ಉಡುಪಿ, ಶ್ರೀ ಅನ್ನಪೂರ್ಣೇಶ್ವರಿ ನಿಲಯ, ಬೊಬ್ಬರ್ಯ ದೈವಸ್ಥಾನ ರಸ್ತೆ, ಉಪ್ಪಿನಕುದ್ರು, ಕುಂದಾಪುರ ತಾಲ್ಲೂಕು – 576230 ಈ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9591217410 / 8152055770 ಅಥವಾ ksywamudupi1624@gmail.com ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧ್ಯಕ್ಷರ ಪ್ರಕಟಣೆ ತಿಳಿಸಿದೆ.






