ಶಿಕ್ಷಣ
ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ; ಕಂಡ್ಲೂರು ರಾಮ್ಸನ್ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Views: 123
ಕುಂದಾಪುರ: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಮೈಸೂರು ಮತ್ತು ಉಪ ನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಸಹಯೋಗದಿಂದ ನಡೆಸಿದ ‘ಜಿಲ್ಲಾ ಮಟ್ಟದ ಪ್ರಾಚ್ಯ ಪ್ರಜ್ಞೆ ರಸಪ್ರಶ್ನೆ ಸ್ಪರ್ಧೆ’ಯಲ್ಲಿ ರಾಮ್ಸನ್ ಸರಕಾರಿ ಪ್ರೌಢಶಾಲೆ ಕಂಡ್ಲೂರು ಇಲ್ಲಿಯ ವಿದ್ಯಾರ್ಥಿಗಳಾದ ಸ್ವಸ್ತಿಕ್ ಮತ್ತು ಚೇತನ ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆ ಗುರುತಿಸಿ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪೋಷಕರು ಹಾಗೂ ಶಾಲಾಭಿವೃದ್ಧಿ ಸಮಿತಿಯವರು ಗೌರವಿಸಿದರು.






