ಶಿಕ್ಷಣ

ಜೀವನ ಮೌಲ್ಯಗಳನ್ನು ರೂಪಿಸಲು ಎನ್.ಎಸ್.ಎಸ್.ಉತ್ತಮ ವೇದಿಕೆ: ಜಯಶೀಲ ಶೆಟ್ಟಿ 

Views: 0

ಕುಂದಾಪುರ :ಜಗತ್ತಿನ ಉಳಿದ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಯಥೇಚ್ಛ ಮಾನವ ಸಂಪನ್ಮೂಲಗಳಿವೆ. ಆದರೆ ಈ ಮಾನವ ಸಂಪನ್ಮೂಲದ ಸರಿಯಾದ ಸದ್ಬಳಕೆ ಆಗುತ್ತಿಲ್ಲ. ಎನ್.ಎಸ್.ಎಸ್. ಅಂತಹ ವೇದಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ. ವಿದ್ಯಾರ್ಥಿಗಳು ಜೀವನ ಮೌಲ್ಯಗಳನ್ನು ರೂಪಿಸುವ ಇಂತಹ ವೇದಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕೋಡಿ ಬ್ಯಾರೀಸ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಶ್ರೀ ಜಯಶೀಲ ಶೆಟ್ಟಿ ಕಂದಾವರ ಹೇಳಿದರು.

ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜೀವನ ಕೌಶಲ್ಯಗಳನ್ನು ರೂಪಿಸಿಕೊಳ್ಳಲು ಎನ್.ಎಸ್.ಎಸ್. ಅತ್ಯುತ್ತಮ ವೇದಿಕೆ ಎಂದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಎನ್.ಎಸ್.ಎಸ್. ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಸ್ವಾಗತಿಸಿದರು. ಎನ್.ಎಸ್.ಎಸ್. ಸ್ವಯಂಸೇವಕಿ ನೇಹಾ ಆರ್. ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ, ಶ್ರೇಯಾ ಖಾರ್ವಿ ಪ್ರಾರ್ಥಿಸಿ, ಎನ್.ಎಸ್.ಎಸ್. ವಿದ್ಯಾರ್ಥಿ ಪ್ರತಿನಿಧಿಗಳಾದ ನಶ್ಯಂತ್ ವಂದಿಸಿ, ಶೃದ್ಧಾ ಕಾರ್ಯಕ್ರಮ ನಿರೂಪಿಸಿದರು.

Related Articles

Back to top button