ಶಿಕ್ಷಣ

ಜುಲೈ14ರಂದು ಬಸ್ರೂರು ಅಪ್ಪಣ್ಣ ಹೆಗ್ಡೆ DIGITAL LEARNING CENTRE & AUDIO-VISUAL ಹಾಲ್ ಉದ್ಘಾಟನೆ

Views: 291

ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಜುಲೈ 14ರಂದು ಬೆಳಿಗ್ಗೆ 10: 30ಕ್ಕೆ ಶ್ರೀಮತಿ ಅನುಪಮಾ ಸುಭಾಷ್ ಚಂದ್ರ ಶೆಟ್ಟಿ ಬಾಂಡ್ಯ ಇವರು ಕೊಡ ಮಾಡಿದ “ಬಸ್ರೂರು ಅಪ್ಪಣ್ಣ ಹೆಗ್ಡೆ DIGITAL LEARNING CENTRE & AUDIO-VISUAL ಹಾಲ್” ಇದರ ಉದ್ಘಾಟನೆಯನ್ನು ಬೆಂಗಳೂರು ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಇದರ ಚೇರ್ಮನ್ ಆರ್.   ಉಪೇಂದ್ರ ಶೆಟ್ಟಿ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಭಾಗವಹಿಸಲಿದ್ದಾರೆ.

ಬಸ್ರೂರು ಶ್ರೀ ಶಾರದಾ ಕಾಲೇಜಿನ ಟ್ರಸ್ಟ್ ಅಧ್ಯಕ್ಷ ಕೆ. ಜಯಕರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾಲೇಜಿನ ಸಂಚಾಲಕರಾದ ಬಸ್ರೂರು ಅಪ್ಪಣ್ಣ ಹೆಗ್ಡೆ, ಪ್ರಾಂಶುಪಾಲೆ ಡಾ.ಚಂದ್ರಾವತಿ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Related Articles

Back to top button