ಜು.21ರೊಳಗೆ ಸಚಿವ ಸಂಪುಟ ವಿಸ್ತರಣೆ ಫಿಕ್ಸ್..! ಯಾರ್ಯಾರು ಸ್ಪರ್ಧೆಯಲ್ಲಿ?
Views: 33
ಕನ್ನಡ ಕರಾವಳಿ ಸುದ್ದಿ: ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಬುಲಾವ್ ನಿರೀಕ್ಷೆಯಲ್ಲಿದ್ದ ರಾಜ್ಯ ನಾಯಕರು ದೆಹಲಿಗೆ ಪ್ರಯಾಣಿಸಿದ್ದು, ಸಚಿವ ಸಂಪುಟ ವಿಸ್ತರಣೆ ಬಹುತೇಕ ಖಚಿತವೆನಿಸಿದೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳು ಕಳೆದರೂ, ಪೂರ್ಣಪ್ರಮಾಣದ ಸಂಪುಟ ರಚನೆಯಾಗದಿರುವುದು ಸಾರ್ವಜನಿಕ ವಲಯದಲ್ಲಿ ಹಾಗೂ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ವಿದೇಶದಿಂದ ವಾಪಸಾಗುತ್ತಿದ್ದಂತೆ, ರಾಜ್ಯ ಕಾಂಗ್ರೆಸ್‌ನಲ್ಲಿ ಸಂಪುಟ ರಚನೆಯ ಪ್ರಕ್ರಿಯೆಗೆ ವೇಗ ಸಿಕ್ಕಿದೆ. ಇದಕ್ಕೆ ಪೂರಕ ಎನ್ನುವಂತೆ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿ ಪ್ರಸಾದ್ ದೆಹಲಿ ಪ್ರವಾಸ ಕೈಗೊಂಡಿರುವುದು ಸಂಪುಟ ವಿಸ್ತರಣೆಗೆ ಕಾಲಕೂಡಿ ಬಂದಿದೆ ಎನ್ನುವ ಮಾತುಗಳಿಗೆ ಪುಷ್ಟಿ ನೀಡಿದೆ.
ಗುರುವಾರ ಎಐಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣು ಗೋಪಾಲ್, ರಣದೀಪ್ ಸುರ್ಜೇವಾಲ ಸಮ್ಮುಖದಲ್ಲಿ ಪುನಾರಚನೆಗೆ ಅಂತಿಮ ಮುದ್ರೆ ಹಾಕುವ ಸಾಧ್ಯತೆಯಿದೆ.
ಬಿ.ಆರ್.ಪಾಟೀಲ್ ಸ್ಪೀಕರ್?
ಈ ನಡುವೆ ಯು.ಟಿ.ಖಾದರ್ ಸಚಿವರಾದ ಬಳಿಕ ತೆರವಾಗಿರುವ ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್, ಎಚ್.ಕೆ. ಪಾಟೀಲ್ ಅವರಲ್ಲಿ ಒಬ್ಬರು ಆಯ್ಕೆಯಾಗಬಹುದು ಎನ್ನಲಾಗಿತ್ತು. ಆದರೀಗ ಬಿ.ಆರ್.ಪಾಟೀಲ್ ಹೆಸರು ಮಂಚೂಣಿಯಲ್ಲಿದ್ದು, ಅವರ ಹೆಸರೇ ಅಂತಿಮವಾಗುವುದು ಬಹುತೇಕ ಖಚಿತ ಎನ್ನಲಾಗಿದೆ.
ಬೀಡುಬಿಟ್ಟಿರುವ ಸಚಿವಾಕಾಂಕ್ಷಿಗಳು
ಗುರುವಾರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜತೆ ರಾಜ್ಯ ನಾಯಕರು ಚರ್ಚಿಸಲು ದೆಹಲಿಗೆ ಆಗಮಿಸುವ ಮೊದಲೇ, ಸಚಿವಾಕಾಂಕ್ಷಿಗಳು ದೆಹಲಿಗೆ ತಲುಪಿದ್ದಾರೆ. ತಮ್ಮ ತಮ್ಮ ಆಪ್ತರ ಮೂಲಕ ಪಕ್ಷದ ಹೈಕಮಾಂಡ್ ಹಾಗೂ ದೆಹಲಿ ನಾಯಕರ ಮೇಲೆ ಒತ್ತಡ ಹೇರುವ ಪ್ರಯತ್ನವನ್ನು ಮುಂದುವರಿಸಿದ್ದಾರೆ. ಖಾಲಿಯಿರುವ 20 ಸಚಿವ ಸ್ಥಾನಕ್ಕೆ ಕನಿಷ್ಠ 60ರಿಂದ 70 ಪ್ರಬಲಾಕಾಂಕ್ಷಿಗಳಿದ್ದು, ಅದರಲ್ಲಿ 50ಕ್ಕೂ ಹೆಚ್ಚು ಶಾಸಕರು ಎರಡು ಅಥವಾ ಅದಕ್ಕಿಂತ ಹೆಚ್ಚಿನ ಬಾರಿ ಶಾಸಕರಾಗಿದ್ದಾರೆ. ವಿಧಾನಸಭಾ ಚುನಾವಣೆಗೆ ಒಂದು ವರ್ಷ 10 ತಿಂಗಳು ಬಾಕಿಯಿರುವಾಗ ಹಾಗೂ ಮುಂದಿನ ಕೆಲ ತಿಂಗಳಲ್ಲಿ ಸ್ಥಳೀಯ ಮುಂದೂಡಲಾಗಿದೆ. ದೆಹಲಿಯಲ್ಲಿ ಪಕ್ಷದ ಹೈಕಮಾಂಡ್ ನೊಂದಿಗೆ ಚರ್ಚಿಸಿ, ವಿಸ್ತರಣೆಯನ್ನು ಖಚಿತಪಡಿಸಿಕೊಂಡೇ ಬರುವ ಸಾಧ್ಯತೆಯಿರುವುದರಿಂದ ಪೂರ್ಣಪ್ರಮಾಣದ ಸಂಪುಟದೊಂದಿಗೆ ಸಚಿವ ಸಂಪುಟ ಸಭೆ ನಡೆಸುವ ಆಲೋಚನೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದೆ.
ಯಾರ್ಯಾರು ಸ್ಪರ್ಧೆಯಲ್ಲಿ?
ಸಂಪುಟ ವಿಸ್ತರಣೆ ವೇಳೆ ಒಕ್ಕಲಿಗ ಕೋಟಾದಲ್ಲಿ ಮಾಗಡಿ ಬಾಲಕೃಷ್ಣ, ಚಲುವರಾಯಸ್ವಾಮಿ ಹೆಸರು ಮುಂಚೂಣಿಯಲ್ಲಿದೆ. ಇನ್ನು ಶಿವಲಿಂಗೇಗೌಡರ ಪರವಾಗಿ ಸಿದ್ದರಾಮಯ್ಯ ಬ್ಯಾಟ್ ಮಾಡಿದ್ದು, ಮಲ್ಲಿಕಾರ್ಜುನ ಖರ್ಗೆ ಲೇಔಟ್ ಕೃಷ್ಣಪ್ಪ ಪರವಾಗಿ ಬ್ಯಾಟ್ ಮಾಡಿದ್ದಾರೆ. ಈ ಇಬ್ಬರಲ್ಲಿ ಒಬ್ಬರನ್ನು ಸೇರಿಸಿಕೊಳ್ಳುವ ಸಾಧ್ಯತೆಯಿದೆ. ಮುಸ್ಲಿಂ ಕೋಟಾ ದಲ್ಲಿ ಎನ್.ಎ.ಹ್ಯಾರೀಸ್, ಸಲೀಂ ಅಹ್ಮದ್, ತನ್ನೀರ್ ಸೇತ್, ರಿಜ್ವಾನ್ ಅರ್ಷದ್ ಹಾಗೂ ಜಮೀರ್ ಹೆಸರಿದೆ. ಈ ಪೈಕಿ ಸಲೀಂ ಅಹ್ಮದ್ ಹಾಗೂ ರಿಜ್ವಾನ್ ಅರ್ಷದ್ ಸಂಪುಟಕ್ಕೆ ಸೇರುವ ಸಾಧ್ಯತೆ ದಟ್ಟವಾಗಿದೆ.
ಇನ್ನು ಇತ್ತ ಸಿಎಂ ಡಿಕೆ ಶಿವಕುಮಾರ್ ಜುಲೈ 17 ಅಥವಾ 18ರಂದು ದೆಹಲಿಗೆ ತೆರಳುವ ಸಾಧ್ಯತೆ ಇದೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಸಿಎಂ ಡಿಕೆ ಶಿವಕುಮಾರ್ ಚರ್ಚಿಸಲಿದ್ದಾರೆ. ಸಂಪುಟ ವಿಸ್ತರಣೆಯ ಬಗ್ಗೆ ವರಿಷ್ಠರ ಜತೆಗೆ ಚರ್ಚಿಸುವ ಸಾಧ್ಯತೆ. ಇದೆ ಜುಲೈ 21ರ ಒಳಗೆ ಸಂಪುಟ ವಿಸ್ತರಣೆ ಮಾಡುವುದು ಸೂಕ್ತ ಎನ್ನುವುದರ ಕುರಿತು ಚರ್ಚಿಸುವ ಸಾಧ್ಯತೆ ಇದೆ






