ಯುವಜನ

ಜೂನ್ 14ಕ್ಕೆ ಕೋಟ-ಪಡುಕರೆ ಸರ್ಕಾರಿ ಪದವಿ ಕಾಲೇಜಿನಲ್ಲಿ “ಉದ್ಯೋಗ ಮೇಳ”

Views: 217

ಕೋಟ: ಇಲ್ಲಿನ ಕೋಟ-ಪಡುಕೆರೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಗೀತಾನಂದ ಫೌಂಡೇಶನ್ ಮಣೂರು-ಪಡುಕೆರೆ ಇವರ ಸಹಭಾಗಿತ್ವದಲ್ಲಿ ದಿನಾಂಕ 14.06.2024 ನೇ ಶುಕ್ರವಾರ ಬೆಳಿಗ್ಗೆ 9:00 ರಿಂದ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಬಹು ರಾಷ್ಟ್ರೀಯ ಕಂಪನಿಗಳು ಮತ್ತು ಸ್ಥಳೀಯ ಕಂಪನಿಗಳು ಆಗಮಿಸುತ್ತಿದ್ದು, SSLC, PUC, NTC, D.Ed, BPEd, B.Ed, BA, B.com, BSW, MSW, MA, M.com, MSc, MBA, BBA, BCA, BTech, MTech ವಿದ್ಯಾರ್ಹತೆ ಹೊಂದಿರುವ ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಮತ್ತು ಪ್ರಸ್ತುತ ಅಂತಿಮ ವರ್ಷದಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ಇದರ ಪ್ರಯೋಜನವನ್ನು ಪಡೆಯಲು ಇದೊಂದು ಸುವರ್ಣಾವಕಾಶ. ಈ ಉದ್ಯೋಗ ಮೇಳದ ಎಲ್ಲಾ ಪ್ರಯೋಜನವನ್ನು ರಾಜ್ಯದ ಎಲ್ಲಾ ಉದ್ಯೋಗಾಕಾಂಕ್ಷಿಗಳು ಮತ್ತು ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ಕಾಲೇಜಿನ ಪ್ರಕಟಣೆಯಲ್ಲಿ ಪ್ರಾಂಶುಪಾಲರು ತಿಳಿಸಿರುತ್ತಾರೆ.

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ರೆಸ್ಯೂಮ್, ಅಂಕಪಟ್ಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್  ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕು.

ಸ್ಥಳದಲ್ಲಿಯೇ ನೋಂದಣಿಗೆ ಅವಕಾಶ ಇದೆ.

ನೋಂದಣಿಗಾಗಿ

ನೋಂದಾಯಿಸಿಕೊಳ್ಳಲು ಸಂಪರ್ಕ

6361192324 / 9448305398 / 9741077118

Related Articles

Back to top button
error: Content is protected !!