ಸಾಮಾಜಿಕ
ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕಿ ಸಾವು

Views: 11
ಜೋಕಾಲಿ ಆಡುತ್ತಿದ್ದ ವೇಳೆ ಹಗ್ಗ ಕುತ್ತಿಗೆಗೆ ಸಿಲುಕಿ ಆರು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಮಳಪ್ಪುರಂ ಜಿಲ್ಲೆಯಲ್ಲಿ ನಡೆದಿದೆ.
ಹಯಾ ಫಾಥಿಮಾ ಮೃತ ಬಾಲಕಿ. ಮಳಪ್ಪುರಂ ಜಿಲ್ಲೆಯ ಕುಟ್ಟಿಪ್ಪುರಂನಲ್ಲಿ ದುರ್ಘಟನೆ ನಡೆದಿದೆ. ಬೆಳಗ್ಗೆ ಶಾಲೆಗೆ ಹೋಗಿದ್ದ ಮಗು, ಮನೆಗೆ ಬಂದ ಮೇಲೆ ಜೋಕಾಲಿ ಆಡುತ್ತಿದ್ದಳು. ಗುರುವಾರ ಸಂಜೆ ಜೋಕಾಲಿ ಆಡುತ್ತಿದ್ದಾಗ ದುರಂತ ಸಂಭವಿಸಿದೆ.
ಹಗ್ಗ ಕುತ್ತಿಗೆಗೆ ಬಿಗಿದಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ. ಪೋಷಕರು ಬಂದು ನೋಡುವಷ್ಟರಲ್ಲಿ ಬಾಲಕಿ ಮೃತಪಟ್ಟಿತ್ತು. ಈ ಸಂಬಂಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಬಾಲಕಿ ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಸಾವನ್ನಪ್ಪಿರುವ ಬಗ್ಗೆ ಶಂಕೆ ಇದೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಆಕೆಯನ್ನು ಬದುಕಿಸಿಕೊಳ್ಳಲು ಆಗಲಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.






