ರಾಜಕೀಯ

ಜೋ ಬೈಡನ್ ಪ್ರಧಾನಿ ದ್ವಿಪಕ್ಷೀಯ ಮಾತುಕತೆ   

Views: 0

ಹೊಸದಿಲ್ಲಿ: ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಹೊಸದಿಲ್ಲಿಗೆ ಆಗಮಿಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಪ್ರಧಾನಿಯವರ ಅಧಿಕೃತ ನಿವಾಸ ನಂ.7 ಲೋಕಕಲ್ಯಾಣ ಮಾರ್ಗ್ ನಲ್ಲಿ ಉಭಯ ನಾಯಕರು ಮಾತುಕತೆ ನಡೆಸಿದರು.

‘‘ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು 7, ಲೋಕಕಲ್ಯಾಣ ಮಾರ್ಗ್ ನಲ್ಲಿ ಸ್ವಾಗತಿಸಲು ಸಂತಸವಾಗುತ್ತಿದೆ. ನಮ್ಮ ಮಾತುಕತೆ ರಚನಾತ್ಮಕವಾಗಿತ್ತು. ಭಾರತ ಹಾಗೂ ಅಮೆರಿಕ ನಡುವೆ ಆರ್ಥಿಕ ಹಾಗೂ ಪ್ರಜಾ ಬಾಂಧವ್ಯಗಳನ್ನು ಅಭಿವೃದ್ಧಿಪಡಿಸುವುದು. ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು ನಾವು ಶಕ್ತರಾಗಿದ್ದೇವೆ. ನಮ್ಮ ದೇಶಗಳ ನಡುವಿನ ಮೈತ್ರಿಯು ಜಾಗತಿಕ ಒಳಿತಿನಲ್ಲಿ ಪ್ರಗತಿಸಾಧಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಲಿವೆ’’ ಎಂದು ಪ್ರಧಾನಿಯವರು ಮಾತುಕತೆಯ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ (ಹಿಂದಿನ ಟ್ವಿಟ್ಟರ್)ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಾತುಕತೆಯ ವೇಳೆ ಅಮೆರಿಕದ ಖಜಾನೆ ಕಾರ್ಯದರ್ಶಿ ಜಾನೆಟ್ ಯೆಲ್ಲೆನ್, ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ಹಾಗೂ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಸಭೆಯಲ್ಲಿ ಉಪಸ್ಥಿತರಿದ್ದರು. ಭಾರತದ ನಿಯೋಗದಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮತ್ತಿತರರಿದ್ದರು.

ಫಲಪ್ರದ ಚರ್ಚೆ’: ಭಾರತ-ಬಾಂಗ್ಲಾದೇಶ ಸಹಕಾರವನ್ನು ವೈವಿಧ್ಯಗೊಳಿಸುವ ಕುರಿತು ಚರ್ಚಿಸಿದ ಪ್ರಧಾನಿ ಮೋದಿ-ಶೇಖ್ ಹಸೀನಾ!

ನವದೆಹಲಿ: ಜಿ20 ಶೃಂಗಸಭೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ದ್ವಿಪಕ್ಷೀಯ ಸಹಕಾರವನ್ನು ವೈವಿಧ್ಯಗೊಳಿಸುವ ಕುರಿತು ಮಾತುಕತೆ ನಡೆಸಿದ್ದು ‘ಸಂಪರ್ಕ’ ಮತ್ತು ವಾಣಿಜ್ಯ ಸಂಬಂಧಗಳಂತಹ ವಿಷಯಗಳ ಕುರಿತು ಚರ್ಚಿಸಿದರು.

ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಅವರೊಂದಿಗಿನ ಮಾತುಕತೆಯ ನಂತರ ತಮ್ಮ ಎರಡನೇ ದ್ವಿಪಕ್ಷೀಯ ಸಭೆಯ ಕುರಿತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಮೋದಿ, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ‘ಫಲಪ್ರದ ಚರ್ಚೆ’ ನಡೆಸಿದ್ದಾರೆ. ಕಳೆದ ಒಂಬತ್ತು ವರ್ಷಗಳಲ್ಲಿ ಭಾರತ ಮತ್ತು ಬಾಂಗ್ಲಾದೇಶದ ಸಂಬಂಧಗಳ ಪ್ರಗತಿಯು ತುಂಬಾ ಆಹ್ಲಾದಕರವಾಗಿದೆ ಎಂದು ಮೋದಿ ಹೇಳಿದ್ದು ಸಂಪರ್ಕ, ವಾಣಿಜ್ಯ ಸಂಪರ್ಕ ಸೇರಿದಂತೆ ಇತರೆ ವಿಷಯಗಳ ಕುರಿತು ಚರ್ಚಿಸಿದ್ದೇವೆ ಎಂದು ಹೇಳಿದ್ದಾರೆ.

ಭಾರತ-ಬಾಂಗ್ಲಾದೇಶ ದ್ವಿಪಕ್ಷೀಯ ಸಹಕಾರವನ್ನು ವೈವಿಧ್ಯಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಫಲಪ್ರದ ಮಾತುಕತೆ ನಡೆಸಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ(ಪಿಎಂಒ) ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ. ಸಂಪರ್ಕ, ಸಂಸ್ಕೃತಿ, ಜನರಿಂದ ಜನರ ಸಂಪರ್ಕ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಸಂಬಂಧಗಳನ್ನು ಬಲಪಡಿಸಲು ಅವರು ಒಪ್ಪಿಕೊಂಡರು.

Related Articles

Back to top button
error: Content is protected !!