ಧಾರ್ಮಿಕ

ಜ.22ರಂದು ಮುಜರಾಯಿ ದೇವಾಲಯದಲ್ಲಿ ವಿಶೇಷ ಪೂಜೆ,ಪ್ರಾರ್ಥನೆ: ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ

Views: 83

ಬೆಂಗಳೂರು, ಅಯೋಧ್ಯೆಯ ರಾಮಮಂದಿರದಲ್ಲಿ ಜ. 22ರಂದು ಶ್ರೀ ರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಸಮಯದಲ್ಲಿ ಕರ್ನಾಟಕದ ಮುಜರಾಯಿ ಇಲಾಖೆಯ ದೇವಾಲಯಗಳಲ್ಲಿ ವಿಶೇಷ ಪೂಜೆ/ ಪ್ರಾರ್ಥನೆ/ ಮಂಗಳಾರತಿಯನ್ನು ನಡೆಸಲು ಸೂತ್ತೋಲೆ ಹೊರಡಿಸಲಾಗಿದೆ.

ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ, ಬೆಂಗಳೂರು ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದಿನಾಂಕ 22.01.2024ರಂದು ಅಯೋಧ್ಯೆಯಲ್ಲಿ ನೂತನ ಶ್ರೀ ರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನ ಪಯುಕ್ತ ವಿಶೇಷ ಪೂಜೆ/ ಪ್ರಾರ್ಥನೆ ನಡೆಸುವ ಬಗ್ಗೆ ಎಂಬ ವಿಷಯವನ್ನು ಸುತ್ತೋಲೆ ಒಳಗೊಂಡಿದೆ.

ರಾಮ ಮಂದಿರ ಉದ್ಘಾಟನೆ ವೇಳೆ ಮನೆಯ ಮುಂದೆ ದೀಪ ಬೆಳಗಲಿ ರಾಮ ಮಂದಿರ ಉದ್ಘಾಟನೆ ವೇಳೆ ಮನೆಯ ಮುಂದೆ ದೀಪ ಬೆಳಗಲಿ

ಶ್ರೀ ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಿರುವ ಶ್ರೀರಾಮ ಮಂದಿರದಲ್ಲಿ ದಿನಾಂಕ 22.01.2024ರಂದು ನೂತನವಾಗಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವು ನಡೆಯಲಿದೆ ಎಂದು ಸುತ್ತೋಲೆ ಹೇಳಿದೆ.

ದೇಶದ/ ರಾಜ್ಯದ ಎಲ್ಲಾ ಜನರ ಒಳಿತಿಗಾಗಿ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಜನವರಿ 22ರಂದು ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಸಮಯದಲ್ಲಿ ವಿಶೇಷ ಪೂಜೆ/ ಪ್ರಾರ್ಥನೆ/ ಮಂಗಳಾರತಿಯನ್ನು ನಡೆಸಲು ಸೂಚಿಸಿದೆ ಎಂದು ಸುತ್ತೋಲೆ ತಿಳಿಸಿದೆ.

Related Articles

Back to top button
error: Content is protected !!