ಧಾರ್ಮಿಕ

ಜ.22 ರಂದು ಅಯೋಧ್ಯೆಯಲ್ಲಿ ರಾಮ ಮೂರ್ತಿ ಪ್ರತಿಷ್ಠಾಪನೆ

Views: 2

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರದಲ್ಲಿ ಜ.22 ರಂದು ರಾಮಮೂರ್ತಿ ಪ್ರತಿಷ್ಠಾಪನೆಯಾಗಲಿದೆ.

ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಗೆ ಇಂದು ಆಮಂತ್ರಣ ನೀಡಿದರು.

ಈ ಬಗ್ಗೆ ಸ್ವತಃ ಪ್ರಧಾನಿಗಳು ಟ್ವೀಟ್ ಮಾಡಿದ್ದು, ತಮ್ಮ ಜೀವಮಾನದಲ್ಲಿ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿರುವುದಕ್ಕೆ ಧನ್ಯನಾಗಿದ್ದೇನೆ ಎಂದು ಹೇಳಿದ್ದಾರೆ.

ತಮಗೆ ಆಮಂತ್ರಣ ನೀಡಿದ್ದನ್ನು ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ, ಜೈ ಸಿಯಾರಾಮ್! ಇಂದು ಅತ್ಯಂತ ಭಾವನಾತ್ಮಕ ದಿನವಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿಗೆ ಆಮಂತ್ರಣ ನೀಡಿದ ತೀರ್ಥ ಕ್ಷೇತ್ರ ಟ್ರಸ್ಟ್ ನ ಭಾಗವಾಗಿ ರಾಜ್ಯದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳು ಭಾಗಿಯಾಗಿದ್ದರು.

ಜ.22 ರಂದು ಅಯೋಧ್ಯೆಯ ಮಂದಿರದಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ ಎಂದು ಅ.25 ರಂದು ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗ್ವತ್ ಹೇಳಿದರು.

Related Articles

Back to top button
error: Content is protected !!