ಯುವಜನ
ಟಿವಿ ರಿಮೋಟ್‍ಗಾಗಿ ಜಗಳ, ಅಜ್ಜಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

Views: 118
ಕನ್ನಡ ಕರಾವಳಿ ಸುದ್ದಿ: ಟಿವಿ ರಿಮೋಟ್‍ಗಾಗಿ ಜಗಳ ಉಂಟಾಗಿ ಅಜ್ಜಿ ಬೈದಿದ್ದಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ.
ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.
ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






