ಟೀಂ ಇಂಡಿಯಾದ ನಾಯಕ ಸೂರ್ಯ ಕುಮಾರ್ ಯಾದವ್ ಬಾಲಿವುಡ್ ನಟಿ ಖುಷಿ ಮುಖರ್ಜಿ ವಿರುದ್ಧ 100 ಕೋಟಿ.ರೂ ಮಾನನಷ್ಟ ಮೊಕದ್ದಮೆ
Views: 59
ಕನ್ನಡ ಕರಾವಳಿ ಸುದ್ದಿ: ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಕುರಿತು ಬಾಲಿವುಡ್ ನಟಿ ಖುಷಿ ಮುಖರ್ಜಿ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಇದೀಗ ನಟಿ ವಿರುದ್ಧ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ.
ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಫೈಜಾನ್ ಅನ್ಸಾರಿ ಜ. 13 ರಂದು ಖುಷಿ ಮುಖರ್ಜಿ ವಿರುದ್ಧ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಮುಂಬೈ ಮೂಲದ ಅನ್ಸಾರಿ ಅವರು ಘಾಜಿಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಕೂಡಲೇ ನಟಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮನವಿ ಮಾಡಿದ್ದಾರೆ. ಖುಷಿ ಮುಖರ್ಜಿ ಅವರ ಹೇಳಿಕೆಗಳು ಸೂರ್ಯಕುಮಾರ್ ಯಾದವ್ ಅವರ ಘನತೆಗೆ ಧಕ್ಕೆ ತರುವಂತಿವೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಖುಷಿ ಮುಖರ್ಜಿ ನೀಡಿದ ಹೇಳಿಕೆಗಳು ಕೇವಲ ಪ್ರಚಾರ ಗಿಟ್ಟಿಸಿಕೊಳ್ಳುವ ಹುನ್ನಾರ. ಇದರಿಂದ ಅಂತಾರಾಷ್ಟ್ರೀಯ ಕ್ರಿಕೆಟಿಗರ ಘನತೆಗೆ ಧಕ್ಕೆಯಾಗಬಹುದು. ಹಾಗಾಗಿ, ನಟಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸುಳ್ಳು ಹೇಳಿಕೆಗಳಿಗೆ ಗಂಭೀರ ಆರೋಪ ಹೊರಿಸಿ ಕನಿಷ್ಠ 7 ವರ್ಷಗಳ ಜೈಲು ಶಿಕ್ಷೆ ಕೊಡಿಸಬೇಕು ಎಂದು ದೂರಿನಲ್ಲಿ ಕೋರಿದ್ದಾರೆ.






