ಡಾ.ದಿನೇಶ್ ಭಟ್ಕಳ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಕೊನೆಯ ವಾಟ್ಸಪ್ ಸಂದೇಶದಲ್ಲಿ ಏನಿದೆ?
Views: 199
ಕನ್ನಡ ಕರಾವಳಿ ಸುದ್ದಿ:ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದ ಪ್ರಸಿದ್ಧ ಹಿರಿಯ ವೈದ್ಯರಾದ ಡಾ.ದಿನೇಶ್ ಭಟ್ಕಳ ಅವರು ಬೆಳಗಾವಿಯ ತಮ್ಮ ನಿವಾಸದಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

ಮೃತ ಡಾ. ದಿನೇಶ್ ಭಟ್ಕಳ ಅವರ ಪತ್ನಿ ಸಾಧನಾ ಭಟ್ಕಳ ಅವರು ಸಹ ವೈದ್ಯೆಯಾಗಿದ್ದು, ಪತಿಯ ಅಗಲಿಕೆಯಿಂದ ಕುಟುಂಬ ತೀವ್ರ ಶೋಕದಲ್ಲಿದೆ. ಇನ್ನು ಕರಾವಳಿ ಮತ್ತು ಬೆಳಗಾವಿ ಭಾಗದಲ್ಲಿ ಜನಪ್ರಿಯರಾಗಿದ್ದ ಹಿರಿಯ ವೈದ್ಯರ ನಿಧನಕ್ಕೆ ಕೆ.ಎಲ್.ಇ ಸಮೂಹ ಸಂಸ್ಥೆಗಳು, ವಿವಿಧ ವೈದ್ಯಕೀಯ ಸಂಘಟನೆಗಳು ಹಾಗೂ ನಾಡಿನ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಕೊನೆಯ ವಾಟ್ಸಪ್ ಸಂದೇಶದಲ್ಲಿ ಏನಿದೆ?
ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮುಂಜಾನೆ 6.57ರ ಸುಮಾರಿಗೆ ಡಾ. ದಿನೇಶ್ ಅವರು ತಮ್ಮ ಸಂಸ್ಥೆಯ ಮುಖ್ಯಸ್ಥರಿಗೆ ವಾಟ್ಸಪ್ ಮೆಸೇಜ್ ಕಳುಹಿಸಿದ್ದರು. “ನನಗೆ ಎದೆ ನೋವನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದಾಗಿ ನಾನು ತ್ವರಿತ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ಇದು ನನ್ನ ಸ್ವಂತ ತೀರ್ಮಾನವಾಗಿದೆ. ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಮಾಡಿ ಹಾಗೂ ಪೊಲೀಸ್ ಕಮಿಷನರ್ ಅವರಿಗೆ ಈ ಬಗ್ಗೆ ಮಾಹಿತಿ ನೀಡಿ” ಎಂದು ಅವರು ತಮ್ಮ ಕೊನೆಯ ಸಂದೇಶದಲ್ಲಿ ವಿನಂತಿಸಿಕೊಂಡಿದ್ದರು. ಈ ಸಂದೇಶವನ್ನು ಕಳುಹಿಸಿದ ಬೆನ್ನಲ್ಲೇ ಬೆಳಗಾವಿಯ ಟಿಳಕವಾಡಿಯ ತಮ್ಮ ಮನೆಯ ಗ್ಯಾಲರಿಯಲ್ಲಿ ಶೂಟ್ ಮಾಡಿಕೊಂಡಿದ್ದಾರೆ.






