ಶಿಕ್ಷಣ

ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಪ್ರೇರಣಾ ಶಿಬಿರ : ಬನ್ನಿ ಸಾಧಕರಾಗೋಣ

Views: 0

ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ‘ಪರಿಚಯ 2023 ಕಾರ್ಯಕ್ರಮ ಆಯೋಜಿಸಲಾಯಿತು.

ಈ ‘ಪ್ರೇರಣಾ ಶಿಬಿರ’ದ ಅಂಗವಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಕೋಟ ವಿವೇಕ ವಿದ್ಯಾಸಂಸ್ಥೆಯ ಬಾಲಕಿಯರ ಪ್ರೌಢ ಶಾಲೆಯ ಶಿಕ್ಷಕರಾದ ಶ್ರೀ ನರೇಂದ್ರ ಕುಮಾರ್ ಕೋಟ “ಬನ್ನಿ ಸಾಧಕರಾಗೋಣ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ವಿದ್ಯಾರ್ಥಿಗಳಿಗೆ ಸಾಧನೆಯ ಮೆಟ್ಟಿಲು ಏರಲು ಬೇಕಾದ ಮಾರ್ಗವನ್ನು ವಿಶ್ಲೇಷಿಸುತ್ತಾ ನೋಡುವ ದೃಷ್ಟಿ ಕೋನವನ್ನು ಬದಲಾಯಿಸಿಕೊಳ್ಳಿ ಎಂಬ ಕಿವಿ ಮಾತಿನ ಜೊತೆಗೆ ಸಾಧಕರ ಉದಾಹರಣೆ ನೀಡುತ್ತಾ ಆತ್ಮ ವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕೆಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಬೋಧಕ-ಬೋಧಕೇತರ ವೃಂದ, ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಶ್ರೀಮತಿ ಪವಿತ್ರ ಶೆಟ್ಟಿ ಸ್ವಾಗತಿಸಿ, ನಿರೂಪಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀ ಅಕ್ಷಯ್ ದೇವಾಡಿಗ ಅತಿಥಿಗಳನ್ನು ಪರಿಚಯಿಸಿದರು.

Related Articles

Back to top button