ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ಸಿದ್ದರಾಮಯ್ಯ ದಿಢೀರ್ ದಿಲ್ಲಿಗೆ ಪ್ರಯಾಣ!
Views: 103
ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ಕಾಂಗ್ರೆಸ್ ನಾಯಕತ್ವ ಬದಲಾವಣೆ ಹೋರಾಟ ಕೊನೆಗೊಂಡಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿದ್ದ ಹಗ್ಗಜಗ್ಗಾಟ ನಿಂತಿದ್ದು, ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದು, ಆ ಸ್ಥಾನದಲ್ಲಿ ಡಿಕೆ ಶಿವಕುಮಾರ್ ಕೂರಲಿದ್ದಾರೆ. ಆದರೆ ಸಿಎಂ ಕುರ್ಚಿಗಾಗಿ ಇವರಿಬ್ಬರ ಮಧ್ಯ ನಡೆಯುತ್ತಿದ್ದ ತಿಕ್ಕಾಟ ಸುಖಾಂತ್ಯ ಕಂಡಿದೆ.
ಸಿದ್ದರಾಮಯ್ಯ ಅವರು ರಾಜ್ಯ ಕಾಂಗ್ರೆಸ್‌ನಲ್ಲಿ ಕಳೆದ 15 ವರ್ಷಗಳಿಂದಲೂ ಅನಭಿಷಿಕ್ತ ನಾಯಕತ್ವ ಹೊಂದಿದ್ದರು. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಶಕ್ತಿ ಕೇಂದ್ರದಲ್ಲಿ ವಿಭಜನೆಯಾಗಿತ್ತು. ಆದರೂ ಸಿದ್ದರಾಮಯ್ಯ ಅವರದು ಒಂದು ಕೈಮೇಲೆ ಎಂಬಂತ ಪರಿಸ್ಥತಿ ಇತ್ತು
ಇಂದು ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿದಂತೆ ಇಲ್ಲಿವರೆಗೂ ಸಿದ್ದರಾಮಯ್ಯ ಅವರ ಸುತ್ತಾಮುತ್ತ ಠಳಾಯಿಸುತ್ತಿದ್ದ ಶಾಸಕರು, ನಾಯಕರು ಏಕಾಏಕಿ ಡಿ.ಕೆ.ಶಿವಕುಮಾರ್ ಅವರ ಮನೆಯತ್ತ ವಾಲಿದೆ.
ಸೋಮವಾರ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮೇಲೆ ಅಥವಾ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸೋ ಸಾಧ್ಯತೆಗಳಿವೆ. ದೊಡ್ಡ ಪ್ರಮಾಣದಲ್ಲಿ ಜನರನ್ನು ಸೇರಿಸಿ ಪದಗ್ರಹಣ ನಡೆಸಲು ಸಿದ್ಧತೆ ನಡೆಸಲಾಗಿದೆ.
ಸೂರ್ಯಾಸ್ತ ಅಥವಾ ಕತ್ತಲಿನ ನಡುವಿನ ಸಮಯವನ್ನು ಗೋಧೂಳಿ ಅವಧಿ ಎಂದು ಕರೆಯಲಾಗುತ್ತದೆ. ಈ ಸಮಯ ಸಂಜೆ 05 ರಿಂದ 07 ರವರೆಗೆ ಮಾತ್ರ ಇರುತ್ತದೆ. ಈ ಗೋಧೂಳಿ ಅವಧಿಯನ್ನು ಅಥವಾ ಸಮಯವನ್ನು ಹಿಂದೂ ಧರ್ಮದಲ್ಲಿ ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ.
ಏಕೆಂದರೆ ಈ ಸಮಯದಲ್ಲಿ ಹಸುಗಳು ತಮ್ಮ ಮನೆಗಳಿಗೆ ಹಿಂದಿರುಗುತ್ತವೆ ಮತ್ತು ಇದನ್ನು ಲಕ್ಷ್ಮಿ ದೇವಿಯ ಆಗಮನದ ಸಮಯವೆಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಹಸುಗಳು, ಪ್ರಾಣಿಗಳು, ಪಕ್ಷಿಗಳು ಮತ್ತು ಇತರ ಜನರು ತಮ್ಮ ಮನೆಗಳಿಗೆ ಮರಳುತ್ತಾರೆ. ಪಕ್ಷಿಗಳು ಸಹ ತಮ್ಮ ಗೂಡಿನ ಕಡೆಗೆ ಆಕಾಶದಲ್ಲಿ ಸಾಲಾಗಿ ಹಾರುತ್ತವೆ. ಈ ಸಮಯವು ಉತ್ಸಾಹ, ಸಂತೋಷ ಮತ್ತು ತಂಪಾದ ವಾತಾವರಣದಿಂದ ಕೂಡಿರುತ್ತದೆ.
ಸಿದ್ದರಾಮಯ್ಯ ದಿಡೀರ್ ದಿಲ್ಲಿಗೆ ಪ್ರಯಾಣ!
ಮುಖ್ಯಮಂತ್ರಿ ಸ್ಥಾನಕ್ಕೆ ಲೋಕಭವನದಲ್ಲಿ ತೆರಳಿ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಹೊಸದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ.
ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ತಮ್ಮ ಆಪ್ತರ ಜತೆಗೆ ಹೊಸದಿಲ್ಲಿಗೆ ತೆರಳಿದರು. ಸಂಜೆ 7:30ರ ಸುಮಾರಿಗೆ ಹೊಸದಿಲ್ಲಿ ತಲುಪಲಿರುವ ಸಿದ್ದರಾಮಯ್ಯ ಅವರು, ಅಲ್ಲಿನ ಕರ್ನಾಟಕ ಭವನದಲ್ಲೆ ವಾಸ್ತವ್ಯ ಹೂಡಲಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕನ ಆಯ್ಕೆ ಹೊಸ ಸಚಿವ ಸಂಪುಟ ರಚನೆ ಹಾಗೂ ಕೆಪಿಸಿಸಿ ಹೊಸ ಅಧ್ಯಕ್ಷರ ಆಯ್ಕೆ ಕುರಿತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.






