ರಾಜಕೀಯ
ಡಿಸೆಂಬರ್ ವೇಳೆಗೆ ಗ್ರಾಪಂ, ಜಿಪಂ, ತಾಪಂ ಚುನಾವಣೆ
Views: 4
ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಶೀಘ್ರವೇ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಸರಕಾರ ಸಜ್ಜಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಗ್ರಾಮ ಪಂಚಾಯಿತಿ ಗಡಿ ಗುರುತಿಸುವಿಕೆಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ (ಮೇ 8) ಮುಗಿದಿದ್ದು, ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಬಳಿಕ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳು ಸಹ ನಡೆಯಲಿವೆ ಎಂದು ಅವರು ಹೇಳಿದರು.
ಮೊದಲ ಹಂತವಾಗಿ ಕ್ಷೇತ್ರಗಳ ಮರುವಿಂಗಡಣೆಯ ಆಕ್ಷೇಪಣೆ ಆಹ್ವಾನ ಪ್ರಕ್ರಿಯೆ ಪೂರ್ಣಗೊಂಡಿದೆ. ವರ್ಷದ ಅಂತ್ಯದ ವೇಳೆಗೆ ಜಿಲ್ಲಾ ಪಂಚಾಯತ್ ಗ್ರಾಪಂ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.






