ರಾಜಕೀಯ

ಡಿ.ಕೆ ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ: ಭವಿಷ್ಯ ನುಡಿದ ಚಂದ್ರಶೇಖರ ಸ್ವಾಮೀಜಿ

Views: 18

ಕನ್ನಡ ಕರಾವಳಿ ಸುದ್ದಿ, ಬೆಳಗಾವಿ: ಡಿ.ಕೆ ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರಿನಲ್ಲಿ ದೇವಸ್ಥಾನದ ಧರ್ಮಸ್ಥಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೈಯಕ್ತಿಕವಾಗಿ ನಾನು ಡಿಕೆಶಿ ಅವರನ್ನು ಸಿಎಂ ಆಗಿ ನೋಡಲು ಇಷ್ಟಪಡುತ್ತೇನೆ ಎಂದಿದ್ದಾರೆ.

ಡಿಕೆಶಿ ಅವರು ಡಿಸಿಎಂ ಆಗಿದ್ದಾರೆ ಅಥವಾ ಮುಂದೆ ಸಿಎಂ ಆಗುತ್ತಾರೆ ಅಂತ ಅಲ್ಲ ಧರ್ಮದ ಗುರುಗಳನ್ನು ಕಂಡರೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುತ್ತಾರೆ. ಆ ಕಾರಣಕ್ಕಾಗಿ ಡಿಸಿಎಂ ಡಿ.ಕೆ ಶಿವಕುಮಾ‌ರ್ ಅವರನ್ನು ಇಷ್ಟಪಡುತ್ತೇನೆ ಎಂದು ಶ್ರೀಗಳು ಹೇಳಿಕೆ ನೀಡಿದರು.

Related Articles

Back to top button
error: Content is protected !!