ಯುವಜನ

ಡೀರ್ ಉದ್ಯಾನದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕ, ಬಾಲಕಿಯ ಶವ ಪತ್ತೆ

Views: 126

ಕನ್ನಡ ಕರಾವಳಿ ಸುದ್ದಿ: ದೆಹಲಿಯ ನೈರುತ್ಯ ಜಿಲ್ಲೆಯ ಡೀರ್ ಉದ್ಯಾನದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕ, ಬಾಲಕಿಯ ಶವ ಪತ್ತೆಯಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಪ್ರಕರಣದಂತೆ ಕಂಡುಬರುತ್ತಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡೂ ಶವಗಳನ್ನು ಮರದಿಂದ ಕೆಳಗಿಳಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಭಾನುವಾರ ಬೆಳಿಗ್ಗೆ ಅಪ್ರಾಪ್ತ ಜೋಡಿಯ ಶವಗಳು ಮರಕ್ಕೆ ನೇತಾಡುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ. ಈ ಪ್ರಕರಣದಲ್ಲಿ ಪೊಲೀಸರು ಆತ್ಮಹತ್ಯೆಯ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಪೊಲೀಸರ ಪ್ರಕಾರ, ಡೀರ್ ಪಾರ್ಕ್‌ನ ಭದ್ರತಾ ಸಿಬ್ಬಂದಿಯೊಬ್ಬರು ಬೆಳಿಗ್ಗೆ 6.31 ಕ್ಕೆ ಪಿಸಿಆರ್‌ಗೆ ಕರೆ ಮಾಡಿ ಶವ ಪತ್ತೆಯಾದ ಬಗ್ಗೆ ಮಾಹಿತಿ ನೀಡಿದರು. ಮೃತ ಹುಡುಗ ಮತ್ತು ಹುಡುಗಿಯ ವಯಸ್ಸು ಸುಮಾರು 17 ವರ್ಷಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಹುಡುಗ ಕಪ್ಪು ಟಿ-ಶರ್ಟ್‌ ಮತ್ತು ನೀಲಿ ಜೀನ್ಸ್ ಧರಿಸಿದ್ದನು ಮತ್ತು ಹುಡುಗಿ ಹಸಿರು ಬಟ್ಟೆ ಧರಿಸಿದ್ದಾಳೆ.ಈ ಇಬ್ಬರು ಸಾಯುವ ನಿರ್ಧಾರ ಏಕೆ ಮಾಡಿರಬಹುದು, ಇದು ಆತ್ಮಹತ್ಯೆಯೋ, ಕೊಲೆಯೋ ಎಂಬ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತರ ಗುರುತು ಇನ್ನೂ ಪತ್ತಯಾಗಿಲ್ಲ. ಯಾವುದೇ ಡೆತ್‌ನೋಟ್ ಕೂಡ ಸಿಕ್ಕಿಲ್ಲ.ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Related Articles

Back to top button
error: Content is protected !!