ಇತರೆ
ಡೇವಿಡ್ ಶೂಟೌಟ್ ಕೃತ್ಯ ನಡೆಸಲು ಹಣ ವರ್ಗಾವಣೆ ಮಾಡಲು ಸಹಾಯ ಮಾಡಿದ ಇಬ್ಬರು ಅರೆಸ್ಟ್
Views: 44
ಕನ್ನಡ ಕರಾವಳಿ ಸುದ್ದಿ: ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಎರ್ಮಾಳ್ ತೆಂಕ ಪಂಚಾಯತ್ ಕಛೇರಿ ಬಳಿಯ ನಿವಾಸಿಗಳಾದ ಚಿರಾಗ್ ಪೂಜಾರಿ(26) ಹಾಗೂ ಮೊಹಮ್ಮದ್ ಇರ್ಷಾದ್(43) ಬಂಧಿತ ಆರೋಪಿಗಳು.
ಈ ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸಿದಾಗ ಚಿರಾಗ್ ಪೂಜಾರಿ ಹಾಗೂ ಮೊಹಮ್ಮದ್ ಇರ್ಷಾದ್ ಎಂಬವರು ಕೃತ್ಯ ನಡೆಸಲು ಹಣ ವರ್ಗಾವಣೆ ಮಾಡಲು ಸಹಾಯ ಮಾಡಿರುವುದು ಕಂಡುಬಂದಿದೆ. ಅದರಂತೆ ಇವರಿಬ್ಬರನ್ನು ಆ.12ರಂದು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ.






