ಡೇವಿಡ್ ಶೂಟೌಟ್ ಪ್ರಕರಣ: ಬೈಂದೂರು ಯಡ್ತರೆಯ ಇನ್ನೊಬ್ಬ ಆರೋಪಿ ಅರೆಸ್ಟ್
Views: 49
ಕನ್ನಡ ಕರಾವಳಿ ಸುದ್ದಿ :ಮದರಂಗಡಿ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಹುದಾರ ಹೌಸ್, ಬಾಳಿಹಿತ್ತು ನಿವಾಸಿ ಲೋಕೇಶ್ ತೇಜ ಕೊಠಾರಿ (42) ಬಂಧಿತ ಆರೋಪಿ.
ಬಂಧಿತ ಲೋಕೇಶ್ ತೇಜ ಕೊಠಾರಿ ಈ ಹಿಂದೆ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದಾಗ ಈ ಪ್ರಕರಣದ ಮತ್ತೋರ್ವ ಆರೋಪಿ ಕಿಶೋರ್ ರಾಮ ಪೂಜಾರಿಯ ಪರಿಚಯವಾಗಿ ಸ್ನೇಹ ಬೆಳೆದಿತ್ತು. ಕೊಲೆ ಕೃತ್ಯಕ್ಕೆ ಸಂಬಂಧಿಸಿದಂತೆ ಈತ ಅನ್ನೋಯಿಲ್ ರಸ್ತೋಗಿ ಹಾಗೂ ರಾಜು ಅವರಿಗೆ ಮೋಟಾರ್ ಸೈಕಲ್‌ಗಳನ್ನು ಒದಗಿಸಿ, ಇತರ ಆರೋಪಿಗಳೊಂದಿಗೆ ಸೇರಿ ಅಪರಾಧಿಕ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಾಚರಣೆ ವೇಳೆ ಆರೋಪಿಯಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್‌ಗಳು ಹಾಗೂ ಮೋಟಾರ್ ಸೈಕಲ್‌ನ ಎಂಜಿನ್ ಮತ್ತು ಚಾಸೀಸ್ ನಂಬರ್‌ಗಳನ್ನು ಅಳಿಸಲು ಬಳಸುತ್ತಿದ್ದ ಯಂತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಲೋಕೇಶ್ ತೇಜ ಕೊರಾರಿಯನ್ನು ಬೈಂದೂರಿನ ಯಡ್ತರೆಯಲ್ಲಿ ವಶಕ್ಕೆ ಪಡೆದು, ಪ್ರಕರಣದ ತನಿಖಾಧಿಕಾರಿಗಳ ಮುಂದೆ ಹಾಜರುಪಡಿಸಿದ್ದು, ಆಗಸ್ಟ್ 21ರಂದು ಆತನನ್ನು ಅಧಿಕೃತವಾಗಿ ಬಂಧಿಸಲಾಗಿದೆ. ಪ್ರಕರಣದ ಮೊದಲ ಆರೋಪಿ ರಾಜು ಎಂಬಾತನನ್ನು ಬೈಂದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸರ್ಕಾರಿ ನೌಕರರ ಮೇಲಿನ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.






