ತಂದೆಯ ಆರೈಕೆಗೆ ಆಸ್ಪತ್ರೆಗೆ ಬಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

Views: 232
ಕನ್ನಡ ಕರಾವಳಿ ಸುದ್ದಿ: ಕಲಬುರಗಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ತಂದೆಯ ಆರೈಕೆಗೆ ಬಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ
ಈ ಬಗ್ಗೆ ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತಂದೆಯ ಆರೈಕೆಗೆ ಅಪ್ರಾಪ್ತ ವಯಸ್ಸಿನ ಬಾಲಕಿ ಬಂದಿದ್ದಳು. ಈ ವೇಳೆ ಆಕೆಯ ಮೇಲೆ ಆಸ್ಪತ್ರೆಯ ಸಿಬ್ಬಂದಿಯೊಬ್ಬ ಹೀನ ಕೃತ್ಯ ಎಸಗಿದ್ದಾನೆ.
ತಾಯಿ ವಿಶೇಷಚೇತನರಾದ ಹಿನ್ನೆಲೆಯಲ್ಲಿ ಬಾಲಕಿ ತಂದೆಯ ಆರೈಕೆಗಾಗಿ ಆಸ್ಪತ್ರೆಗೆ ಬಂದಿದ್ದಳು. ಈ ವೇಳೆ ಸ್ವಚ್ಛತಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬ, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಒಂದು ವಾರದಿಂದ ತಂದೆ ಮತ್ತು ಮಗಳು ಆಸ್ಪತ್ರೆಯಲ್ಲಿದ್ದರು. ಅವರದೇ ಊರಿನ ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಬಟ್ಟೆ, ಮತ್ತಿತರ ವಸ್ತುಗಳನ್ನು ತರಲು ಮಗಳನ್ನು ಕಳುಹಿಸಿ ಎಂದು ಕರೆದೊಯ್ದು ವ್ಯಕ್ತಿ, ಬಾಲಕಿಯ ಆರ್ಥಿಕ ಪರಿಸ್ಥಿತಿ ದುರುಪಯೋಗಪಡಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ವೈದ್ಯಕೀಯ ಕಾಲೇಜಿನ ವಿಶ್ರಾಂತಿ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆರೋಪಿ ಸಂಪತ್ ಕೆವಡೆಕರ್‌ನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.