ಸಾಮಾಜಿಕ

ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೆ ಸೇರಿಸುವ ಮಕ್ಕಳ ವಿರುದ್ಧ ಕ್ರಿಮಿನಲ್ ಕೇಸ್..!

Views: 116

ಬೆಂಗಳೂರು, ಹೆತ್ತು-ಹೊತ್ತು, ಸಾಕಿ ಸಲಹಿದ ಪೋಷಕರನ್ನು ಮನೆಯಿಂದ ಹೊರ ಹಾಕಲಾಗುತ್ತಿದೆ. ಇನ್ನು ಕೆಲವರು ಸಾಕಲು ಶಕ್ತರಾಗಿದ್ದರೂ  ಹಣ ನೀಡಿ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಿದ್ದಾರೆ. ಹೀಗೆ ಸುಖಾಸುಮ್ಮನೆ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಿರುವುದರಿಂದ ಅನೇಕರು ಆಶ್ರಮದಲ್ಲಿ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ.

ತಂದೆ ತಾಯಿಯನ್ನು ಸರಿಯಾಗಿ ನೋಡಿಕೊಳ್ಳದೆ ಅವರನ್ನು ಮಕ್ಕಳು ವೃದ್ಧಾಶ್ರಮಕ್ಕೆ ಹಾಕುತ್ತಿರುವ ಪ್ರಕರಣಗಳು ನಗರದಲ್ಲಿ ನಡೆಯುತ್ತಿವೆ. ಹೀಗಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರ ಸೂಚನೆ ಮೇರೆಗೆ ಬೆಂಗಳೂರು ಪೊಲೀಸರು ಮಹತ್ಕಾರ್ಯಕ್ಕೆ ಕೈ ಹಾಕಿದ್ದು, ಇನ್ನು ಮುಂದೆ ಪೋಷಕರನ್ನು ವೃದ್ಧಾಶ್ರಮಕ್ಕೆ ಹಾಕುವ ಮಕ್ಕಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.

2024 ಹೊಸ ವರ್ಷದ ಬಳಿಕ ಹೊಸ ಹೆಜ್ಜೆ ಇಟ್ಟ ನಗರ ಪೊಲೀಸರು, ನಗರದ ವೃದ್ಧಾಶ್ರಮಗಳ ಮೇಲೆ‌ ಕಣ್ಣಿಟ್ಟಿದ್ದಾರೆ. ತಂದೆ ತಾಯಿಯನ್ನು ಸರಿಯಾಗಿ ನೋಡಿಕೊಳ್ಳದ ಮಕ್ಕಳ ಮೇಲೆ ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಕೇಸ್ ಬುಕ್ ಮಾಡುವಂತೆ ಪೊಲೀಸ್ ಕಮೀಷನರ್ ಬಿ. ದಯಾನಂದ್ ಸೂಚನೆ ನೀಡಿದ್ದಾರೆ.

ವೃದ್ಧಾಶ್ರಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು, ತಮ್ಮ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿರುವ ಆರ್ಥಿಕವಾಗಿ ಶಕ್ತರಾಗಿರುವ ಮಕ್ಕಳನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ. ವೃದ್ಧಾಶ್ರಮಗಳಿಂದ ತಮ್ಮ ಪೋಷಕರನ್ನು ಕರೆದೊಯ್ಯುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ತಂದೆ ತಾಯಿಯನ್ನು ಮನೆಗೆ ವಾಪಸ್ ಕಳುಹಿಸಿ ಇಳಿ ವಯಸ್ಸಿನಲ್ಲಿ ಮಕ್ಕಳು ಮೊಮ್ಮಕ್ಕಳೊಂದಿಗೆ ಸಂತೋಷದಿಂದ ಇರುವಂತೆ ಮಾಡಲು ಪೊಲೀಸರು ಮುಂದಾಗಿದ್ದಾರೆ.

Related Articles

Back to top button
error: Content is protected !!