ಯುವಜನ

ತಂದೆ ಬುದ್ಧಿವಾದ ಹೇಳಿದ್ದಕ್ಕೆ ಮಗ ನೇಣು ಬಿಗಿದು ಆತ್ಮಹತ್ಯೆ 

Views: 79

ಕನ್ನಡ ಕರಾವಳಿ ಸುದ್ದಿ : ತಂದೆ ಬುದ್ದಿವಾದ ಹೇಳಿದ್ದಕ್ಕೆ ಮನನೊಂದ  ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ಶುಕ್ರವಾರ (ಮೇ 30) ನಡೆದಿದೆ.

ಶಿವಳ್ಳಿ ಗ್ರಾಮದ ವಿನಯ ಹಡಪದ (16) ಎಂಬ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ತಂದೆ ಮಗನಿಗೆ ಬುದ್ದಿವಾದ ಹೇಳಿದ್ದ. ಆದರೆ, ತಂದೆ ಬುದ್ಧಿವಾದ ಹೇಳಿದ್ದನ್ನೇ ನೆಪವಾಗಿಟ್ಟುಕೊಂಡು ಮಗ ವಿನಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಡುಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.

Related Articles

Back to top button