ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಕುಡಿಸಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಬಂಧನ
Views: 114
ಕನ್ನಡ ಕರಾವಳಿ ಸುದ್ದಿ: ದಾವಣಗೆರೆ ಜಿಲ್ಲೆಯಲ್ಲಿ ಸಮಾಜ ತಲೆತಗ್ಗಿಸುವಂತ ಕೃತ್ಯ ನಡೆದಿದೆ. ಹತ್ತು ಜನ ಆರೋಪಿಗಳು 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.
ಈ ಕುರಿತು ಸಂತ್ರಸ್ತ ಮಹಿಳೆಯು ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
ಗ್ರಾಮದ ಹೊರವಲಯದಲ್ಲಿನ ತೋಟದಲ್ಲಿ ಆರೋಪಿಗಳು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಕುರಿತು ಪ್ರಕರಣ ದಾಖಲಾಗಿದೆ.
ಅತ್ಯಾಚಾರದ ಕೃತ್ಯವನ್ನು ಮೊಬೈಲ್ನಲ್ಲಿ ವಿಡಿಯೋ ಮಾಡಿಕೊಂಡ ಆರೋಪಿಗಳು ಬಳಿಕ ಪ್ರಕರಣ ಗಂಭೀರವಾಗುತ್ತಿದ್ದಂತೆ ಡಿಲಿಟ್ ಮಾಡಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.
ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.
ಸ್ಥಳಕ್ಕೆ ಎಸ್ಪಿ ಶೇಖರ್ ಹೆಚ್ ಟಿ ಸೇರಿದಂತೆ ಹಿರಿಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಕುಡಿಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಎಸಗಲಾಗಿದೆ ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ.






