ತರಗತಿ ನಡೆಯುತ್ತಿರುವ ವೇಳೆ ಪ್ರೊಫೆಸರ್ ವಿದ್ಯಾರ್ಥಿನಿಗೆ ಪ್ರಪೋಸ್: ತಕ್ಷಣವೇ ವಿದ್ಯಾರ್ಥಿನಿಯ ಪ್ರತಿಕ್ರಿಯೆ ಏನು?
Views: 114
ಕನ್ನಡ ಕರಾವಳಿ ಸುದ್ದಿ: ಮೆಡಿಕಲ್ ಕಾಲೇಜೊಂದರಲ್ಲಿ ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ. ತರಗತಿ ನಡೆಯುತ್ತಿರುವ ವೇಳೆ ಪ್ರೊಫೆಸರ್ ಒಬ್ಬರು ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಕರಣ ಇದೀಗ ವಿವಾದಕ್ಕೆ ಕಾರಣವಾಗಿದೆ.
ಮಾಹಿತಿ ಪ್ರಕಾರ, ಪ್ರೊಫೆಸರ್ ಅಬ್ದುಲ್ ಎಂಬವರು ಕ್ಲಾಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ನೀಡಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಈ ವರ್ತನೆಗೆ ಅಸಮಾಧಾನಗೊಂಡ ವಿದ್ಯಾರ್ಥಿನಿ ತಕ್ಷಣವೇ ಪ್ರಶ್ನಿಸಿ, ಆಕ್ರೋಶದಲ್ಲಿ ಪ್ರತಿಕ್ರಿಯೆ ನೀಡಿದ್ದಾಳೆ.
ಆಕ್ರೋಶಗೊಂಡು ತರಗತಿಯಲ್ಲೇ ಪ್ರಶ್ನಿಸಿದ್ದಾರೆ.ಅಬ್ದುಲ್ ಅವರ ಮಾತಿನಿಂದ ಕೋಪಗೊಂಡ ವಿದ್ಯಾರ್ಥಿನಿ ತನ್ನ ಚಪ್ಪಲಿಯಿಂದ ಥಳಿಸಿದ್ದಾರೆ. ಆ ಸಂದರ್ಭದಲ್ಲಿ ಸಹ ವಿದ್ಯಾರ್ಥಿಗಳು ವಿದ್ಯಾರ್ಥಿನಿಯನ್ನು ಸಮಾಧಾನಪಡಿಸಿ ಕರೆದುಕೊಂಡು ಹೋಗಿದ್ದಾರೆ.
ಪ್ರೊಫೆಸರ್ ವರ್ತನೆಯಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್‌ನಲ್ಲೇ ಅಟ್ಟಾಡಿಸಿ ಹೊಡೆದಿದ್ದಾರೆ. ಆ ಸಂದರ್ಭದಲ್ಲಿ ಅಬ್ದುಲ್ ತಮ ಕಾರಿನ ಬಳಿ ಹೋಗುತ್ತಿದ್ದಂತೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇದರಿಂದ ಹೆದರಿದ ಪ್ರೊಫೆಸರ್ ವಿದ್ಯಾರ್ಥಿಗಳಿಂದ ತಪ್ಪಿಸಿಕೊಂಡು ಸ್ಥಳದಿಂದ ಕಾಲ್ಕಿತ್ತಿದ್ದಾನೆೆ.
ಈ ಘಟನೆ ನಂತರ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಇತರ ವಿದ್ಯಾರ್ಥಿಗಳೂ ಪ್ರೊಫೆಸರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಯಾಂಪಸ್‌ನಲ್ಲೇ ಅವರನ್ನು ಹಿಂಬಾಲಿಸಿ ಹೊಡೆದಿರುವ ಘಟನೆ ವರದಿಯಾಗಿದೆ.
ಸ್ಥಿತಿ ಗಂಭೀರವಾಗುತ್ತಿದ್ದಂತೆ ಪ್ರೊಫೆಸರ್ ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಈ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಈ ಘಟನೆ ಕಾಲೇಜು ವಾತಾವರಣದಲ್ಲಿ ಶಿಕ್ಷಕ-ವಿದ್ಯಾರ್ಥಿ ಸಂಬಂಧಗಳ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂಬ ಮಾತು ಕೇಳಿಬರುತ್ತಿದೆ.






