ಕರಾವಳಿ
ತಲೆಗೆ ಕಲ್ಲಿನಿಂದ ಜಜ್ಜಿ ಕಾರ್ಮಿಕನ ಕೊಲೆ

Views: 75
ಕನ್ನಡ ಕರಾವಳಿ ಸುದ್ದಿ: ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಅಸ್ಸಾಂ ಮೂಲದ ಕಾರ್ಮಿಕನೊಬ್ಬನನ್ನು ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆಗೈದ ಘಟನೆ ನಡೆದಿದೆ.
ಅಸ್ಸಾಂ ರಾಜ್ಯದ ದೀಪಕ್ ಬೆಂಗರ ((34) ಕೊಲೆಗೀಡಾದ ವ್ಯಕ್ತಿ
ಈತ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕಾರ್ಮಿಕನಾಗಿ ತೊಡಗಿಸಿಕೊಂಡಿದ್ದ, ಬುಧವಾರ ಮುಂಜಾನೆ ಕಾಮಗಾರಿಯ ಸಲುವಾಗಿ ಕಾರ್ಮಿಕರು ಕಟ್ಟಡವನ್ನು ಪ್ರವೇಶಿಸಿದಾಗ ಕಟ್ಟಡದ ಮೊದಲ ಮಹಡಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ತಲೆಯ ಭಾಗವನ್ನು ಕಲ್ಲಿನಿಂದ ಜಜ್ಜೆ ಕೊಲೆಗೈದ ಸ್ಥಿತಿಯಲ್ಲಿ ಶವ ಕಂಡು ಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಅಧೀಕ್ಷಕ ಡಾ. ಯತೀಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರ ಮತ್ತು ವಿಧಿ ವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ