ತಾಯಿಯನ್ನು ಹತ್ಯೆಗೈದು ಮಗ ಆತ್ಮಹತ್ಯೆಗೆ ಶರಣು
Views: 0
ಕನ್ನಡ ಕರಾವಳಿ ಸುದ್ದಿ: ಖಿನ್ನತೆಯಿಂದ ಬಳಲುತ್ತಿದ್ದ 22 ವರ್ಷದ ಯುವಕನೊಬ್ಬ ತನ್ನ ತಾಯಿಯನ್ನೇ ಚಾಕುವಿನಿಂದ ಇರಿದು ಕೊಲೆಗೈದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಮಟ್ಟನ್ನೂರಿನಲ್ಲಿ ನಡೆದಿದೆ.
ಮೃತರನ್ನು ನಿವೃತ್ತ ಶಾಲಾ ಶಿಕ್ಷಕಿ ಜ್ಯೋತಿ(56) ಹಾಗೂ ಅವರ ಪುತ್ರ ನವೀನ್ ಕೃಷ್ಣನ್ ಎಂದು ಗುರುತಿಸಲಾಗಿದೆ.
ಜ್ಯೋತಿ ಅವರ ಪತಿ ಜಯಕೃಷ್ಣನ್ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದಾಗ ತಾಯಿ ಮತ್ತು ಮಗ ಇಬ್ಬರೂ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.
ಕೂಡಲೇ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಮಟ್ಟನ್ನೂರು ವೃತ್ತ ನಿರೀಕ್ಷಕ ಸಿಜು ಅವರ ಪ್ರಕಾರ, ನವೀನ್ ಮೊದಲು ತನ್ನ ತಾಯಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾನೆ. ಬಳಿಕ ತಾನೂ ಕುತ್ತಿಗೆ ಹಾಗೂ ಹೊಟ್ಟೆಯ ಭಾಗಕ್ಕೆ ಚಾಕುವಿನಿಂದ ಇರಿದುಕೊಂಡು ಪ್ರಾಣ ಕಳೆದುಕೊಂಡಿದ್ದಾನೆ.
ಇನ್ನು ಪ್ರಾಥಮಿಕ ಪೊಲೀಸ್ ತನಿಖೆಯಲ್ಲಿ ನವೀನ್ ತೀವ್ರ ಖಿನ್ನತೆಯಿಂದ ಬಳಲುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.






