ರಾಜಕೀಯ

ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಯಾವಾಗ?

Views: 90

ಕನ್ನಡ ಕರಾವಳಿ ಸುದ್ದಿ: ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕೊನೆಗೂ ಕಾಲ ಕೂಡಬಂದಿದೆ. ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದಾಗಿ ಹೈಕೋರ್ಟ್ಗಿಂದು ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.

ಅವಧಿ ಮುಗಿದು 3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯಿತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ‌ ಅರ್ಜಿ ವಿಚಾರಣೆ ಫೆಬ್ರವರಿ 17 ನಡೆದಿದ್ದು, ಈ ವೇಳೆ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮೇ ತಿಂಗಳ ಬಳಿಕ ಎಲೆಕ್ಷನ್ ನಡೆಸುವುದಾಗಿ ಸ್ಪಷ್ಟಪಡಿಸಿದರು. ಈ ಹೇಳಿಕೆ ದಾಖಲಿಸಿಕೊಂಡು ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿತು.

ಮೂರು ವರ್ಷಗಳಾದರೂ ಸಹ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್ಗೆ ನ್ಯಾಯಾಂಗ ನಿಂದನೆ‌ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡು ಹೈಕೋರ್ಟ್, ಮುಂದೆ ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಹೇಳಿದರು.

ಬಳಿಕ ಇದಕ್ಕೆ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಪ್ರತಿಕ್ರಿಯಿಸಿ, ಮೇ ತಿಂಗಳೊಳಗೆ ಮೀಸಲಾತಿ ನೀಡುವುದಾಗಿ ಸ್ಪಷ್ಟಪಡಿಸಿದರು. ಏನೆ ಆಗಲಿ ಮೇ ಅಂತ್ಯದೊಳಗೆ ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಕೊಡಲಾಗುವುದು. ಜೂನ್ ಅಥವಾ ಜುಲೈ ತಿಂಗಳಲ್ಲಿ ಚುನಾವಣೆ ಆಯೋಗ, ಚುನಾವಣೆಗಳನ್ನು ನಡೆಸಬಹುದು ಎಂದು ತಿಳಿಸಿದರು.

ಸರ್ಕಾರದ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ಈ ಹೇಳಿಕೆಯನ್ನು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿತು. ಈ ಮೂಲಕ ನನೆಗುದಿಗೆ ಬಿದ್ದಿದ್ದ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕೊನೆ ಕಾಲ ಕೂಡಿಬಂದಂತಿದೆ.

ಇನ್ನು ಈ ಸಂಬಂಧ ಫೆಬ್ರವರಿ 16 ಅಷ್ಟೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಸ್ಥಳೀಯ ಸಂಸ್ಥೆ ಚುನಾವಣೆಗೆ ತಯರಾಗಿ ಎಂದು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ಸರ್ಕಾರದ ಪರ ವಕೀಲರು ಮೇ ತಿಂಗಳ ನಂತರ ಚುನಾವಣೆ ನಡೆಸುವುದಾಗಿ ಹೇಳಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

Related Articles

Back to top button
error: Content is protected !!