ಇತರೆ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೊರಟಿದ್ದ ಐವರು ಸ್ಥಳದಲ್ಲೇ ದುರ್ಮರಣ

Views: 37

ಕನ್ನಡ ಕರಾವಳಿ ಸುದ್ದಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ತೆರಳುತ್ತಿದ್ದ ಭಕ್ತರ ಕಾರೊಂದು ಭೀಕರ ಅಪಘಾತಕ್ಕೀಡಾಗಿ ಬೆಂಗಳೂರು ಮೂಲದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ದಾರುಣ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ಬಳಿ ನಡೆದಿದೆ.

ಮೃತರೆಲ್ಲರೂ ಬೆಂಗಳೂರಿನ ರಾಜಾಜಿನಗರದ ನಿವಾಸಿಗಳು ಎಂದು ತಿಳಿದುಬಂದಿದೆ. ಮೃತರನ್ನು ಮೋಹನ್‌ದಾಸ್‌‌‌ (71), ನಾಗರಾಜ್‌‌‌ ರಾವ್‌, ಕುಸುಮ (61), ಹಾಗೂ ಜಯಂತಿ (59) ಸೇರಿದಂತೆ ಒಟ್ಟು ಐವರು ಎಂದು ಗುರುತಿಸಲಾಗಿದೆ.

ರಾಜಾಜಿನಗರ ಮೂಲದ ಈ ಐವರು ಒಂದೇ ಕಾರಿನಲ್ಲಿ ತಿರುಪತಿ ದೇವಸ್ಥಾನಕ್ಕೆ ಹೊರಟಿದ್ದರು. ಚಿತ್ತೂರು ಜಿಲ್ಲೆ ವ್ಯಾಪ್ತಿಯ ಪಲಮನೇರು ಬಳಿಯ ಹೆದ್ದಾರಿಯಲ್ಲಿ ತೆರಳುತ್ತಿದ್ದಾಗ, ವೇಗವಾಗಿ ಚಲಿಸುತ್ತಿದ್ದ ಇವರ ಕಾರು ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಟ್ರಕ್‌‌ಗೆ  ಹಿಂದಿನಿಂದ ಭೀಕರವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನೊಳಗೆ ಸಿಲುಕಿಕೊಂಡಿದ್ದ ಐವರೂ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯ ಪೊಲೀಸರು, ನಜ್ಜುಗುಜ್ಜಾಗಿದ್ದ ಕಾರಿನಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

 

Related Articles

Back to top button
error: Content is protected !!