ರಾಜಕೀಯ

ತುಮಕೂರು “ಗೋ ಬ್ಯಾಕ್ ಸೋಮಣ್ಣ” ಘೋಷಣೆ.. ಮಾಧುಸ್ವಾಮಿಗೆ ಟಿಕೆಟ್ ಆಗ್ರಹಿಸಿ ಬೆಂಬಲಿಗನಿಂದ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ.‌!

Views: 11

ತುಮಕೂರು: ಲೋಕಸಭಾ ಚುನಾವಣೆಯ ಬಿಜೆಪಿ ಟಿಕೆಟ್‍ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿಗೆ ನೀಡುವಂತೆ ಆಗ್ರಹಿಸಿ ತಿಪಟೂರು ಸೇರಿದಂತೆ ನಾಲ್ಕು ತಾಲ್ಲೂಕುಗಳ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿ ‘ಗೋ ಬ್ಯಾಕ್ ಸೋಮಣ್ಣ’ ಘೋಷಣೆ ಕೂಗಿದ ಘಟನೆ ಭಾನುವಾರ ನಡೆಯಿತು.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಕ್ರಾಸ್‍ನಲ್ಲಿ ಭಾನುವಾರ ಮಧ್ಯಾಹ್ನ ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಗುಬ್ಬಿ ತಾಲ್ಲೂಕಿನ ಬಿಜೆಪಿ ಮುಖಂಡರು, ಕಾರ್ಯಕರ್ತರು, ಜೆ.ಸಿ.ಮಾಧುಸ್ವಾಮಿ ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟನೆ ನಡೆಸಿ ಜೆ.ಸಿ.ಮಾಧುಸ್ವಾಮಿಗೆ ತುಮಕೂರು ಟಿಕೆಟ್ ನೀಡುವಂತೆ ಆಗ್ರಹಿಸಿದರು.

ಸಂಸದ ಎಂ.ಪಿ.ಬಸವರಾಜು ಹಾಗೂ ವಿ.ಸೋಮಣ್ಣ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ನಂತರ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಅಭಿಮಾನಿ ಚೇತನ್ ಎಂಬಾತ ಪೆಟ್ರೋಲ್ ತೆಗೆದುಕೊಂಡು ಬಂದು ಬೆಂಕಿ ಹಚ್ಚಿಕೊಳ್ಳಲು ಮುಂದಾಗಿದ್ದು ಪೊಲೀಸರು, ಜೆಸಿಎಂ ಬೆಂಬಲಿಗರ ಸಹಕಾರದೊಂದಿಗೆ ತಡೆದರು. ಕೆಲ ನಿಮಿಷಗಳ ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಜೆಸಿಎಂ ಅಭಿಮಾನಿಗಳು ಆಕ್ರೋಶ ಹೊರಹಾಕಿದರು.

ತಿಪಟೂರು ನಗರಸಭೆ ಮಾಜಿ ಸದಸ್ಯ ಪ್ರಸನ್ನ ಕುಮಾರ್ ಮಾತನಾಡಿ ತುಮಕೂರು ಜಿಲ್ಲೆಗೆ ಜೆ.ಸಸಿ.ಮಧುಸ್ವಾಮಿ ಕೊಡುಗೆ ಅಪಾರವಾಗಿದ್ದು, ಜಿಲ್ಲೆಗೆ ನೀರಾವರಿ ಹರಿಕಾರ ಎಂದರೆ ತಪ್ಪಾಗಲಾರದು. ಜಿಲ್ಲಾ ಉಸ್ತವಾರಿ ಸಚಿವರಾಗಿದ್ದ ಕಾಲದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ತುಮಕೂರು ಜಿಲ್ಲೆಯನ್ನು ಸಂಪೂರ್ಣ ಅರಿತಿದ್ದು ಸ್ಥಳೀಯರಿಗೆ ಟಿಕೆಟ್ ನೀಡಿದರೆ ಕಾರ್ಯಕರ್ತರಿಗೆ, ಜನಸಮಾನ್ಯರಿಗೆ ಅನುಕೂಲವಾಗುತ್ತದೆ. ಜಿಲ್ಲೆಯ ಹೊರಗಿನಿಂದ ಬಂದು ಚುನಾವಣೆ ನಿಂತವರು ಯಾರೂ ಇಲ್ಲಿಯವರೆಗೂ ಗೆದ್ದಿರುವ ಉದಾಹಣೆಯೇ ಇಲ್ಲ ಎಂದು ಟಿಕೆಟಿಗಾಗಿ ಆಗ್ರಹಿಸಿದ್ದಾರೆ.

Related Articles

Back to top button
error: Content is protected !!