ಸಾಂಸ್ಕೃತಿಕ

ತುಳುನಾಡಿನ ದೈವದ ಮೊರೆ ಹೋದ ಸ್ಟಾರ್ ನಟ ವಿಶಾಲ್! 

Views: 180

ಕನ್ನಡ ಕರಾವಳಿ ಸುದ್ದಿ: ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ತುಳುನಾಡಿನ ನೇಮೋತ್ಸವದಲ್ಲಿ ಭಾಗಿಯಾಗಿ ಅಚ್ಚರಿ ಮೂಡಿಸಿದ್ದಾರೆ.

ಮಂಗಳವಾರ ರಾತ್ರಿ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ವಾರ್ಷಿಕ ನೇಮ ನಡೆದಿದ್ದು, ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ, ಸುಮಾರು ಮೂರು ಗಂಟೆಗಳ ಕಾಲ ಭಕ್ತಿಯಿಂದ ಜಾರಂದಾಯ ನೇಮವನ್ನು ನೋಡಿದ್ದಾರೆ. ಇತ್ತೀಚೆಗೆ ವಿಶಾಲ್ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು, ಇದಕ್ಕಾಗಿ ದೈವಕ್ಕೆ ಪ್ರಾರ್ಥನೆ ಸಲ್ಲಿಸಿದ್ದು, ಸಂಪೂರ್ಣ ಗುಣಮುಖವಾಗಿ ಬಂದು ಶ್ರೀ ಕ್ಷೇತ್ರದಲ್ಲಿ ತುಲಾಭಾರ ಸೇವೆ ಕೊಡಲು ಅರ್ಚಕರು ಸೂಚಿಸಿದ್ದು, ಇದಕ್ಕೆ ವಿಶಾಲ್ ಒಪ್ಪಿದ್ದಾರೆ.

ಇದಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಟ ವಿಶಾಲ್, ಕಾಂತಾರ ಸಿನಿಮಾದಲ್ಲಿ ದೈವ ಮತ್ತು ಇಲ್ಲಿನ ನೇಮೋತ್ಸವದ ಬಗ್ಗೆ ತಿಳಿದಿದ್ದೇನೆ. ಇದೀಗ ಪ್ರಥಮ ಬಾರಿಗೆ ತುಳುನಾಡಿನ ನೇಮೋತ್ಸವವನ್ನು ನೋಡುತ್ತಿದ್ದೇನೆ. ತುಂಬಾ ಖುಷಿ ನೀಡಿದೆ, ನಿನ್ನೆ ಕೊಲ್ಲೂರು ಮುಕಾಂಬಿಕೆ ದರ್ಶನ ಪಡೆದು ಇದೀಗ ಇಲ್ಲಿಗೆ ಭೇಟಿ ನೀಡಿದ್ದೇನೆ ಎಂದರು.

 

Related Articles

Back to top button