ಇತರೆ
ತೆಕ್ಕಟ್ಟೆಯಲ್ಲಿ ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ಪೊಲೀಸರ ದಾಳಿ, ಆರೋಪಿಗಳ ಬಂಧನ

Views: 295
ಕೋಟ: ತೆಕ್ಕಟ್ಟೆ ಮೀನು ಮಾರುಕಟ್ಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜುಗಾರಿ ಆಡುತ್ತಿರುವ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಇಸ್ಪೀಟು ಜುಗಾರಿ ಆಟ ಆಡುತ್ತಿದ್ದ ಸದಾಶಿವ ಹಾಗೂ ಇತರ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆಟಕ್ಕೆ ಬಳಸಿದ ಒಟ್ಟು 2,460 ರೂಪಾಯಿ ಹಾಗೂ ಇಸ್ವೀಟು ಎಲೆಗಳು, ಮೊಬೈಲ್ ಫೋನ್, ಇನ್ನಿತರ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ, ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






