ಇತರೆ

ತೆಕ್ಕಟ್ಟೆಯಲ್ಲಿ ಇಸ್ಪೀಟ್ ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ:7 ಮಂದಿ ಬಂಧನ

Views: 165

ಕನ್ನಡ ಕರಾವಳಿ ಸುದ್ದಿ: ತೆಕ್ಕಟ್ಟೆ ಗ್ರಾಮದ ಜನಪ್ರಿಯ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿರುವ ಎಸ್.ಪಿ. ಕ್ರಿಯೇಶನ್ ಕ್ಲಬ್ ನಲ್ಲಿ ಪಣವಾಗಿಟ್ಟು ಇಸ್ಪೀಟ್ ಜುಗಾರಿ ಆಡುತ್ತಿದ್ದರೆಂಬ ಖಚಿತ ಮಾಹಿತಿಯ ಮೇರೆಗೆ ಕೋಟ ಠಾಣೆ ಪೊಲೀಸರು ದಾಳಿ ನಡೆಸಿ ಏಳು ಮಂದಿಯನ್ನು ಬಂಧಿಸಿದ್ದಾರೆ.

ಪಿಎಸ್‌ಐ ಪ್ರವೀಣ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಶ್ರೀನಿವಾಸ (63), ಸೂರ್ಯ (51), ಚಂದ್ರಹಾಸ (40), ಕೃಷ್ಣ (46), ಫುರಂದರ (44), ರಜಾಕ್ (52), ಸದಾಶಿವ ದೇವಾಡಿಗ (48) ಅವರನ್ನು ಬಂಧಿಸಲಾಗಿದೆ.

ಪೊಲೀಸರು ಸ್ಥಳದಿಂದ ನಗದು, ಇಸ್ಪೀಟ್ ಆಟಕ್ಕೆ ಬಳಸುವ ವಸ್ತುಗಳು, ಮೊಬೈಲ್ ಫೋನ್‌ಗಳು 7, ಸಿಸಿ ಟಿವಿ ಡಿವಿಆರ್ ಮತ್ತು ಮಾನಿಟರ್, ಕ್ಲಬ್ ಲೆಡ್ಜರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button