ಕರಾವಳಿ

ತೋಡು ದಾಟುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶದಿಂದ ಯುವತಿ ಸಾವು 

Views: 196

ಬೆಳ್ತಂಗಡಿ :ತೋಡು ದಾಟುತ್ತಿದ್ದ  ವೇಳೆ ಸ್ಟೇ ವಯರ್‌ ಗೆ ವಿದ್ಯುತ್‌ ತಂತಿ ಸ್ಪರ್ಶಿಸಿದ ಕಾರಣ ಯುವತಿಗೆ ವಿದ್ಯುತ್‌ ಶಾಕ್‌ ತಗುಲಿ ಮೃತಪಟ್ಟ  ಘಟನೆ ಬೆಳ್ತಂಗಡಿಯ ಶಿಬಾಜೆ ಗ್ರಾಮದಲ್ಲಿ  (ಜೂ.27) ರ ಸಂಜೆ ನಡೆದಿದೆ.

ಪ್ರತೀಕ್ಷಾ ಶೆಟ್ಟಿ (21) ಮೃತ ಯುವತಿ. ಇವರು ಶಿಬಾಜೆ ಗ್ರಾಮದ ಬರ್ಗುಳ ನಿವಾಸಿ ಗಣೇಶ್‌ ಶೆಟ್ಟಿ ಮತ್ತು ರೋಹಿಣಿ ದಂಪತಿಗಳ ಪುತ್ರಿ.

ಮನೆಯ ಸಮೀಪದ ರಸ್ತೆ ಕಡೆ ಪಾರ್ಸೆಲ್‌ ತೆಗೆದುಕೊಳ್ಳಲು ಬಂದಿದ್ದ ಪ್ರತೀಕ್ಷಾ ಈ ವೇಳೆ ರಸ್ತೆಯಲ್ಲಿ ಹರಿದಾಡುತ್ತಿದ್ದ ವಯರ್‌ ನೋಡದೇ ನೀರಿನಲ್ಲಿ ವಿದ್ಯುತ್‌ ಪ್ರವಹಿಸಿದ ಪರಿಣಾಮ ಅದನ್ನು ಸ್ಪರ್ಶಿಸಿದ್ದಾರೆ. ಸ್ಥಳದಲ್ಲಿದ್ದ ತಂದೆ ಅವರನ್ನು ರಕ್ಷಣೆ ಮಾಡಲು ಪ್ರಯತ್ನಿಸಿದರೂ ತಂದೆಗೂ ವಿದ್ಯುತ್‌ ಆಘಾತವಾಗಿದೆ.ವಿದ್ಯುತ್ ತಂತಿ ತುಂಡಾಗಿ ಕಂಬದ ಮೂಲಕ ತೋಡಿನ ನೀರಿಗೆ ವಿದ್ಯುತ್ ಪ್ರವಹಿಸಿದ್ದೇ ದುರಂತಕ್ಕೆ ಕಾರಣ

ಕೂಡಲೇ ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದರೂ ಯುವತಿ ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ

ಘಟನೆಯಿಂದ ಮೆಸ್ಕಾಂ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಇದೇ ಸಂದರ್ಭದಲ್ಲಿ ಲೈನ್ ಮ್ಯಾನ್ ಇದ್ದಿದ್ದರೆ ಪ್ರತೀಕ್ಷಾ ಬದುಕುವ ಸಾಧ್ಯತೆ ಇತ್ತು. ಮೆಸ್ಕಾಂ ಇಲಾಖೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿದ್ದು 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸರ್ಕಾರವನ್ನು ಅಗ್ರಹಿಸಿದ್ದಾರೆ. ಮೆಸ್ಕಾಂ ಇಲಾಖೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಹೆಚ್ಚಿನ ಪರಿಹಾರಕ್ಕೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ತಿಳಿಸಿದ್ದಾರೆ.

Related Articles

Back to top button
error: Content is protected !!