ಕ್ರೀಡೆ

ಥ್ರೋಬಾಲ್ ಸ್ಪರ್ಧೆ; ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿನಿಯರು ವಿಭಾಗ ಮಟ್ಟಕ್ಕೆ ಆಯ್ಕೆ

Views: 5

ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ 14ರ ವಯೋಮಾನದ ವಿಭಾಗದ ಥ್ರೋಬಾಲ್ ಸ್ಪರ್ಧೆಯಲ್ಲಿ ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕರ ಕಚೇರಿ ಮತ್ತು ಬೈಂದೂರು ತಾಲೂಕು ಆಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಎಂಟನೇ ತರಗತಿಯ ತನಿಷ್ಕಾ, ಸಾನಿಕಾ, ಮತ್ತು ಪ್ರೇಕ್ಷಾ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿನಿಯರು. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಫಲಕ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.  

ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯ ಕ್ರೀಡಾಪಟುಗಳಿಗೆ ತರಬೇತಿಯನ್ನು ನೀಡಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

Related Articles

Back to top button
error: Content is protected !!