ಶಿಕ್ಷಣ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಅತಿಥಿ ಉಪನ್ಯಾಸಕರು ಇಂದಿನಿಂದ ವಿವಿಧ ಬೇಡಿಕೆ ಅಗ್ರಹಿಸಿ ಪದವಿ ತರಗತಿ ಬಹಿಷ್ಕಾರ

Views: 9

ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ರಾಜ್ಯ ವ್ಯಾಪಿ ತರಗತಿ ಬಹಿಷ್ಕರಿಸಿ, ಪ್ರತಿಭಟನೆ ನಡೆಸುತ್ತಿದ್ದು, ಇದನ್ನು ಬೆಂಬಲಿಸಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಸರಕಾರಿ ಕಾಲೇಜುಗಳಲ್ಲಿ ಡಿಸೆಂಬರ್ 6 ರಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ಅತಿಥಿ ಉಪನ್ಯಾಸಕರು ತೀರ್ಮಾನಿಸಿದ್ದಾರೆ.

ಎರಡು ಜಿಲ್ಲೆಯ 600 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕಾರ ನಡೆಸುವ ಸಾಧ್ಯತೆ ಇದ್ದು, ಸರಕಾರದ ಸಿಬ್ಬಂದಿ ಸೇವಾ ನಿಯಮಾವಳಿಯಂತೆ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಖಾಯಂ ಗೊಳಿಸಬೇಕು. ಸಹಜ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು. ಹಾಗೂ ಮಂಗಳೂರು ವಿ.ವಿ ವ್ಯಾಪ್ತಿಯ ಎಲ್ಲಾ ಅತಿಥಿ ಉಪನ್ಯಾಸಕರಿಗೆ ಕಡಿಮೆ ಅವಧಿಯಲ್ಲಿ ನಿರ್ವಹಿಸಿರುವ ಹೆಚ್ಚುವರಿ ಕಾರ್ಯಾಗಾರಕ್ಕೆ ಹೆಚ್ಚುವರಿ ವೇತನವನ್ನು ನೀಡಬೇಕು ಎಂಬ ಇನ್ನಿತರ ಬೇಡಿಕೆಯೊಂದಿಗೆ ಪ್ರತಿಭಟನೆ ನಡೆಸಲಾಗುವುದು.

ಶಾಂತಿಯುತ ಪ್ರತಿಭಟನೆಗೆ ಸರಕಾರ ಸ್ಪಂದಿಸಿ, ಅತಿಥಿ ಉಪನ್ಯಾಸಕರ ಮಾನವೀಯ ಬೇಡಿಕೆಗಳನ್ನು ಪರಿಗಣಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುತ್ತದೆ. ಡಿಸೆಂಬರ್ 7ರ ಒಳಗೆ ಸೂಕ್ತ ಸ್ಪಂದನೆ ನೀಡದಿದ್ದಲ್ಲಿ ತರಗತಿ ಬಹಿಷ್ಕಾರದೊಂದಿಗೆ ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ದ.ಕ ಜಿಲ್ಲಾ ಅಧ್ಯಕ್ಷ ಧೀರಜ್ ಕುಮಾರ್, ಪ್ರಧಾನ ಕಾರ್ಯದರ್ಶಿ ಮಹಾಂತೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button