ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ: ಅಂಗನವಾಡಿ, ಪಿಯು  ಕಾಲೇಜುವರೆಗೆ ಇಂದು ರಜೆ ಘೋಷಣೆ

Views: 51

ಕನ್ನಡ ಕರಾವಳಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಇಂದು ಶನಿವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜುವರೆಗೆ ರಜೆ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ ವರುಣನ ಆರ್ಭಟಕ್ಕೆ ಜನರು ನಲುಗಿ ಹೋಗಿದ್ದಾರೆ. ನೂರಾರು ಮನೆಗಳಿಗೆ ನೀರು ನುಗ್ಗಿದೆ. ಹಲವೆಡೆ ಗುಡ್ಡ ಕುಸಿದಿದೆ.

ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಒಂದೇ ದಿನ ಐವರು ಮೃತಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್ ಇದ್ದರೆ, ಬೆಳಗಾವಿ, ಕಲಬುರಗಿ, ವಿಜಯಪುರ, ಬೀದ‌ರ್ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ

ಗುಡುಗು, ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಎಚ್ಚರಿಕೆ ನೀಡಲಾಗಿದೆ.

 

Related Articles

Back to top button